ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!

newsics.com ಚಂಡೀಗಢ: ಹಲವೆಡೆ ತಾಪಮಾನ ಹೆಚ್ಚಳವಾಗಿದೆ. ಬಿಸಿಲಿನ ತಾಪದಿಂದ ಬೇಸತ್ತ ಅಮೃತಸರದ ಐಐಎಮ್‍ನ ವಿದ್ಯಾರ್ಥಿಗಳು ಹಾಸ್ಟೆಲ್‍ನಲ್ಲಿ ಎಸಿ ಅಳವಡಿಸುವಂತೆ ಆಗ್ರಹಿಸಿ ಮೆಸ್‍ನಲ್ಲಿ ವಿನೂತನವಾಗಿ `ನಿದ್ರಾʼ ಪ್ರತಿಭಟನೆ ನಡೆಸಿದ್ದಾರೆ. ವಿಡಿಯೋದಲ್ಲಿ ವಿದ್ಯಾರ್ಥಿಗಳು ಕುರ್ಚಿ ಮೇಲೆ ಕುಳಿತು, ಟೇಬಲ್ ಮೇಲೆ ತಲೆ ಇರಿಸಿಕೊಂಡು ನಿದ್ರಿಸುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿರುವುದು ಕಂಡುಬಂದಿದೆ. ಹಾಸ್ಟೆಲ್‍ನ ಸೌಲಭ್ಯಗಳನ್ನು ಒದಗಿಸುವ ಹಾಗೂ ನಿರ್ವಹಣೆಯ ವೈಫಲ್ಯದ ವಿರುದ್ಧ ಮೌನ ಪ್ರತಿಭಟನೆಯ ಸಂಕೇತವಾಗಿ ವಿದ್ಯಾರ್ಥಿಗಳು ಈ ರೀತಿ ಪ್ರತಿಭಟಿಸಿದ್ದಾರೆ ಎಂದು ಹೇಳಲಾಗಿದೆ. ಯಾವುದೇ ಆಕ್ರಮಣಕಾರಿ ವಿಧಾನಗಳನ್ನು ಬಳಸದೆ … Continue reading ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!