newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಹಲ್ಲೆ ವೇಳೆ ನಟ ದರ್ಶನ್ ಧರಿಸಿದ್ದ ಶೂಗಳು ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ.
ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರ ಮನೆಯಲ್ಲಿ ದರ್ಶನ್ ಶೂಗಳನ್ನು ಜಪ್ತಿ ಮಾಡಿದ್ದಾರೆ.
ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿದ್ದರು. ಬಳಿಕ ದರ್ಶನ್ ಶೆಡ್‌ನಿಂದ ನೇರವಾಗಿ ರಾಜರಾಜೇಶ್ವರಿನಗರದ ತನ್ನ ಮನೆಗೆ ತೆರಳಿ ಬಟ್ಟೆ ಹಾಗೂ ಶೂಗಳನ್ನು ಬದಲಿಸಿ ಸ್ನಾನ ಮಾಡಿಕೊಂಡು ಮೈಸೂರಿಗೆ ತೆರಳಿದ್ದರು.
ಬಳಿಕ ಮನೆಯ ಕೆಲಸಗಾರ ಆ ಶೂಗಳನ್ನು ಹೊಸಕೆರೆಯಹಳ್ಳಿಯ ವಿಜಯಲಕ್ಷ್ಮೀ ಅವರ ಮನೆಗೆ ತೆಗೆದುಕೊಂಡು ಹೋಗಿ ಇರಿಸಿದ್ದ.
ಪೊಲೀಸರು ಸ್ಥಳ ಮಹಜರು ವೇಳೆ ರಾಜರಾಜೇಶ್ವರಿನಗರದ ದರ್ಶನ್ ಮನೆಯಲ್ಲಿ ಕೊಲೆ ದಿನ ದರ್ಶನ್ ಧರಿಸಿದ್ದ ಬಟ್ಟೆಗಳನ್ನು ಜಪ್ತಿ ಮಾಡಿದ್ದರು. ಆದರೆ, ಶೂಗಳು ಮಾತ್ರ ಸಿಕ್ಕಿರಲಿಲ್ಲ. ಈ ಬಗ್ಗೆ ಆರೋಪಿಗಳನ್ನು ವಿಚಾರಣೆ ಮಾಡಿದಾಗ ದರ್ಶನ್ ಮನೆಯ ಕೆಲಸಗಾರ ಆ ಶೂಗಳನ್ನು ವಿಜಯಲಕ್ಷ್ಮೀ ಮನೆಗೆ ತೆಗೆದುಕೊಂಡು ಹೋಗಿರುವುದು ಗೊತ್ತಾಗಿದೆ. ಬಳಿಕ ಪೊಲೀಸರು ವಿಜಯಲಕ್ಷ್ಮೀ ಮನೆಗೆ ತೆರಳಿ ಆ ಶೂಗಳನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ
ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್