newsics.com
ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದು ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಪೊಲೀಸರು ಮೊದಲ ಆರೋಪಿಯನ್ನು ಬಂಧಿಸಿದ್ದಾರೆ.
ರಿಯಾಸಿಯಲ್ಲಿ ಜೂನ್ 9ರಂದು ಉಗ್ರರು ಯಾತ್ರಿಕರ ಮೇಲೆ ದಾಳಿ ನಡೆಸಲು ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸಿದ ಹಕೀಮ್ ದಿನ್ ಎಂಬ ಶಂಕಿತ ಉಗ್ರನನ್ನು ಪೊಲೀಸರು ರಾಜೌರಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಬಂಧಿತನ ವಿಚಾರಣೆ ನಡೆಯುತ್ತಿದ್ದು, ಸ್ಫೋಟಕ ಮಾಹಿತಿ ಲಭಿಸುವ ಸಾಧ್ಯತೆ ಇದೆ.
ರಾಜೌರಿ ಜಿಲ್ಲೆಯಲ್ಲಿ ಹಕೀಮ್ ದಿನ್ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಈತನೇ ದಾಳಿಯ ರೂವಾರಿ ಆಗದಿದ್ದರೂ, ಉಗ್ರರ ದಾಳಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾನೆ. ಇದರಿಂದ ಉಗ್ರರು ಸುಲಭವಾಗಿ ದಾಳಿ ಮಾಡಲು ಸಾಧ್ಯವಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ