newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿರುವ ನಟ ದರ್ಶನ್ ಮನೆಯಲ್ಲಿ ಬುಧವಾರ (ಜೂನ್ 19) ಪೊಲೀಸರು 37.40 ಲಕ್ಷ ರೂ. ಜಪ್ತಿ ಮಾಡಿಕೊಂಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ಎರಡು ದಿನ ಪೊಲೀಸ್ ಕಸ್ಟಡಿಗೆ ವಹಿಸಿದೆ.
ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸೇರಿ ಒಟ್ಟು 11 ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ನ್ಯಾಯಾಲಯಕ್ಕೆ ಪೊಲೀಸರು ಎರಡು ರಿಮ್ಯಾಂಡ್ ಅರ್ಜಿಗಳನ್ನು ಸಲ್ಲಿಸಿದ ಕಾರಣ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಹಾಗೂ ನ್ಯಾಯಾಂಗ ಬಂಧನಕ್ಕೆ ವಹಿಸಿದೆ.
ಪೊಲೀಸರೇ ನ್ಯಾಯಾಲಯಕ್ಕೆ ಸಲ್ಲಿಸಿದ ರಿಮ್ಯಾಂಡ್ ಅರ್ಜಿಯಲ್ಲಿ ಹಣ ವಶಪಡಿಸಿಕೊಂಡಿರುವ ಕುರಿತು ಮಾಹಿತಿ ನೀಡಿದ್ದಾರೆ. “ಜೂನ್ 19ರಂದು ಎ2 ಆರೋಪಿಯ ಮನೆಯಿಂದ 37.40 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ, ಆರೋಪಿಯು ತನ್ನ ಹೆಂಡತಿಗೆ ನೀಡಿದ್ದ 3 ಲಕ್ಷ ರೂಪಾಯಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಹಾಗಾಗಿ, ವಶಪಡಿಸಿಕೊಂಡಿರುವ ಹಣದ ಮೂಲದ ಬಗ್ಗೆ ಆರೋಪಿಯಿಂದ ಮಾಹಿತಿ ಪಡೆದು, ತನಿಖೆ ಮಾಡಬೇಕಿದೆ” ಎಂಬುದಾಗಿ ಪೊಲೀಸರು ಉಲ್ಲೇಖಿಸಿದ್ದಾರೆ.
ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ