Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Heat wave ತಾಪಮಾನ ಹೆಚ್ಚಳ, ದೆಹಲಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವು, ನೆರವಿಗೆ ಮುಂದಾದ ಕೇಂದ್ರ
ದೇಶಪ್ರಮುಖ

Heat wave ತಾಪಮಾನ ಹೆಚ್ಚಳ, ದೆಹಲಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವು, ನೆರವಿಗೆ ಮುಂದಾದ ಕೇಂದ್ರ

Share
2 Min Read
SHARE

newsics.com

ನವದೆಹಲಿ: ತೀವ್ರ ತಾಪಮಾನದಿಂದ ಉತ್ತರ ಮತ್ತು ಪೂರ್ವ ಭಾರತದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ತೀವ್ರ ತಾಪಮಾನ ಸಾವು ನೋವುಗಳನ್ನು ಹೆಚ್ಚಿಸಿದೆ. ಈಗಾಗಲೇ ಐವತ್ತಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ. ಹಲವರು ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಸಿಲಿನ ತಾಪದಿಂದ ಸಂಕಷ್ಟಕ್ಕೆ ಒಳಗಾಗಿರುವ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ರೋಗಿಗಳ ರಕ್ಷಣೆ ಹಾಗೂ ನೆರವಿಗೆ ಧಾವಿಸುವಂತೆ ಹಾಗೂ ವಿಶೇಷ ಘಟಕಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಒಡೆತನದ ಎಲ್ಲ ಆಸ್ಪತ್ರೆಗಳಿಗೆ ಸಲಹೆ ಹಾಗೂ ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳಲ್ಲಿ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹೇಳಿದೆ. ಈ ಮೂಲಕ ಈಗ ಉಂಟಾಗಿರುವ ಹೀಟ್ ವೇವ್ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 43 ರಿಂದ 45 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ ಎಂದು IMD ತಿಳಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ದಿನಗಳಲ್ಲಿ ಹೀಟ್ ಸ್ಟ್ರೋಕ್ ಮತ್ತು ಶಾಖದ ಬಳಲಿಕೆಯಿಂದ ಹಲವರು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಗಳು ಹೇಳುತ್ತಿವೆ.

48 ಗಂಟೆಯಲ್ಲಿ 50ಕ್ಕೂ ಹೆಚ್ಚು ಸಾವು:

ಕಳೆದ 48 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ 50 ಶವಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಆದರೆ ಸಾವಿನ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಗರಿಷ್ಠ ತಾಪಮಾನ 43.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಸಾಮಾನ್ಯಕ್ಕಿಂತ ಅಧಿಕವಾಗಿದೆ. ದೆಹಲಿಯಲ್ಲಿ ಕನಿಷ್ಠ ತಾಪಮಾನವು 35.2 ಡಿಗ್ರಿ ಸೆಲ್ಸಿಯಸ್ ಆಗಿತ್ತು, ಇದು 1969 ರಿಂದ ಜೂನ್‌ನಲ್ಲಿ ದಾಖಲಾಗಿದ್ದ ತಾಪಮಾನಕ್ಕಿಂತ ಅತಿ ಹೆಚ್ಚು ಎಂದು ಹೇಳಲಾಗಿದೆ.

ಆರ್‌ಎಂಎಲ್ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಲ್ಲಿ 22 ರೋಗಿಗಳು ದಾಖಲಾಗಿದ್ದಾರೆ. ಐದು ಸಾವುಗಳು ಸಂಭವಿಸಿವೆ ಮತ್ತು 12 ರೋಗಿಗಳು ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ದಾಖಲಾಗಿರುವ 42 ರೋಗಿಗಳು ಸೇರಿದಂತೆ ಒಟ್ಟು 60 ಹೀಟ್‌ಸ್ಟ್ರೋಕ್ ಪ್ರಕರಣಗಳು ದಾಖಲಾಗಿವೆ.

ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಲ್ಲಿ ಶಂಕಿತ ಹೀಟ್ವೇವ್ನಿಂದ ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮೂಲಗಳು ತಿಳಿಸಿವೆ.

ಪರಿಸ್ಥಿತಿ ಪರಿಶೀಲನೆ:

ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಸಿಗಾಳಿಯಿಂದಾಗಿ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವವರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಬಿಸಿಗಾಳಿಯಿಂದ ಉಂಟಾಗಿರುವ ಪರಿಸ್ಥಿತಿ ಮತ್ತು ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದಾರೆ. ಕೇಂದ್ರ ಸರಕಾರದಿಂದ ಚಾಲನೆಯಲ್ಲಿರುವ ಆಸ್ಪತ್ರೆಗಳಲ್ಲಿ ವಿಶೇಷ ಘಟಕಗಳನ್ನು ಆರಂಭಿಸುವಂತೆ ಇದೇ ವೇಳೆ ಸಚಿವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯವು ಆರೋಗ್ಯ ಸೌಲಭ್ಯದ ಸನ್ನದ್ಧತೆಗೆ ನಿರ್ದೇಶನಗಳನ್ನು ನೀಡಿದೆ. ಉತ್ತರ ಭಾರತ ಹಾಗೂ ಇನ್ನಿತರ ರಾಜ್ಯಗಳಿಗೂ ಕೇಂದ್ರ ಸೂಚನೆ ನೀಡಿದ್ದು, ಬಿಸಿಗಾಳಿಯಿಂದ ಉಂಟಾಗಿರುವ ಪರಿಣಾಮಗಳನ್ನು ಎದುರಿಸಲು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.

ಉತ್ತರ ಪ್ರದೇಶ, ದಕ್ಷಿಣ ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ಮತ್ತು ಒಡಿಶಾ, ಜಾರ್ಖಂಡ್, ಬಿಹಾರ ಮತ್ತು ಜಮ್ಮು ವಿಭಾಗದ ಕೆಲವು ಭಾಗಗಳಲ್ಲಿ ಬಿಸಿಗಾಳಿಯಿಂದ ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ನಕಲಿ ಮದ್ಯ ಸೇವನೆ: ಮೃತರ ಸಂಖ್ಯೆ 25ಕ್ಕೇರಿಕೆ, ಜಿಲ್ಲಾಧಿಕಾರಿ ಎತ್ತಂಗಡಿ, ಎಸ್ಪಿ ಅಮಾನತು

ಒಟಿಟಿಯಲ್ಲಿ ಈ ತಿಂಗಳು ನಿಮಗಾಗಿ ಕಾದಿವೆ ಈ ಸೂಪರ್ ಹಿಟ್ ಸಿನಿಮಾಗಳು

ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ ಬಸ್ ಪ್ರಯಾಣ ದರವೂ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ

UGC- NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಎಕ್ಸಾಂ ರದ್ದು, ಸಿಬಿಐ ತನಿಖೆಗೆ ಆದೇಶ

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ಕೇಂದ್ರ ಸರ್ಕಾರ

TAGGED:Heat wave Temperature increasemore than 50 people died in Delhithe center came to help
Share This Article
Facebook Twitter Copy Link Print
Previous Article ನಕಲಿ ಮದ್ಯ ಸೇವನೆ: ಮೃತರ ಸಂಖ್ಯೆ 25ಕ್ಕೇರಿಕೆ, ಜಿಲ್ಲಾಧಿಕಾರಿ ಎತ್ತಂಗಡಿ, ಎಸ್ಪಿ ಅಮಾನತು
Next Article ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?