newsics.com
ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರ ಹೆಚ್ಚು ಗಮನ ಸೆಳೆಯುತ್ತಿದೆ.
ಶ್ರೀನಗರದಲ್ಲಿ ಶುಕ್ರವಾರ(ಜೂ.21) ನಡೆಯಲಿರುವ ಯೋಗ ದಿನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡರು.
ಮೂರನೇ ಬಾರಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಕಣಿವೆ ನಾಡಿಗೆ ಮೋದಿ ಆಗಮಿಸಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಮಾಡಲಾಗಿದೆ.
ಪ್ರಸಿದ್ಧ ದಾಲ್ ಸರೋವರದ ದಡದಲ್ಲಿರುವ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಸುಮಾರು 7 ಸಾವಿರ ಜನರೊಂದಿಗೆ ಮೋದಿ ಯೋಗಾಭ್ಯಾಸ ನಡೆಸಿದರು.
ಇದೇ ಸಂದರ್ಭದಲ್ಲಿ 1,500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ಅವರು ನೆರವೇರಿಸುವರು.
ಯೋಗದಲ್ಲಿ ಭಾಗಿಯಾಗುತ್ತಿರುವ ಜನರಿಗೆ ಕಳೆದ ಮೂರು ದಿನಗಳಿಂದ ಯೋಗಾಸನ ತರಬೇತಿ ನೀಡಲಾಗಿದೆ. ಕಾಲೇಜುಗಳು, ಸಾರ್ವಜನಿಕ ಉದ್ಯಾನವನಗಳು, ಸ್ಥಳೀಯ ಕ್ರೀಡಾಂಗಣ ಸೇರಿದಂತೆ ಅನೇಕ ಕಡೆಗಳಲ್ಲಿ ಯೋಗ ದಿನಾಚರಣೆ ನಡೆಯಿತು.
https://x.com/ANI/status/1803981490646323674?t=0SJuvOvkJFleh7DMVDyeVw&s=08