Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NET ಅಕ್ರಮ: ಸಾರ್ವಜನಿಕ ಪರೀಕ್ಷೆಗಳ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ
ದೇಶಪ್ರಮುಖ

NET ಅಕ್ರಮ: ಸಾರ್ವಜನಿಕ ಪರೀಕ್ಷೆಗಳ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ

Share
1 Min Read
SHARE

newsics.com
ನವದೆಹಲಿ: ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET)ಯಲ್ಲಿ ಅಕ್ರಮ ನಡೆದಿದೆ ಎಂದು ಪರೀಕ್ಷೆಯನ್ನು ರದ್ದು ಮಾಡಿ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆಯನ್ನು ಜಾರಿಗೆ ತರಲು ಅಧಿಸೂಚನೆ ನೀಡಿದೆ. 2024ಕ್ಕೆ ಅನ್ವಯವಾಗುವಂತೆ ಈ ಕಾಯಿದೆಯನ್ನು ಜಾರಿ ಮಾಡಲಾಗಿದೆ.

ಇದು ದೇಶಾದ್ಯಂತ ನಡೆಯುವ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ನಡೆಯುವ ಅನ್ಯಾಯ ಹಾಗೂ ಅಕ್ರಮವನ್ನು ತಡೆಗಟ್ಟುವ ಉದ್ದೇಶ ಹೊಂದಿದೆ.

2024 ಫೆಬ್ರವರಿಯಲ್ಲಿ ನಡೆದ ಸಂಸತ್ ಸಭೆಯಲ್ಲಿ ಈ ಕಾನೂನನ್ನು ಅಂಗೀಕರಿಸಲಾಗಿತ್ತು. ಈ ಮೂಲಕ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಮೋಸ, ಅಕ್ರಮ ನಡೆಸುವವರಿಗೆ ಕನಿಷ್ಠ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆ ನೀಡುವ ಬಗ್ಗೆಯೂ ಈ ಕಾನೂನಿನಲ್ಲಿ ಒಳಗೊಂಡಿತ್ತು. ವಂಚಕ ಏಜೆಂಟ್‌ಗಳ ಜತೆಗೆ ಕೈಜೋಡಿಸಿರುವವರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡ ವಿಧಿಸಲಾಗುವುದು ಎಂದು ಈ ಕಾನೂನಿನಲ್ಲಿ ತಿಳಿಸಲಾಗಿತ್ತು.

ಪ್ರಶ್ನೆ ಪತ್ರಿಕೆಗಳು ಅಥವಾ ಉತ್ತರ ಕೀಗಳನ್ನು ಸೋರಿಕೆ ಮಾಡುವುದು. ಅನಧಿಕೃತ ಸಂವಹನದ ಮೂಲಕ ಅಭ್ಯರ್ಥಿಗಳಿಗೆ ಸಹಾಯ ಮಾಡುವುದು. ಕಂಪ್ಯೂಟರ್ ನೆಟ್‌ವರ್ಕ್‌ಗಳು ಅಥವಾ ಸಂಪನ್ಮೂಲಗಳನ್ನು ತಿದ್ದುವುದು. ನಕಲಿ ಪರೀಕ್ಷೆಗಳನ್ನು ನಡೆಸುವುದು ಅಥವಾ ನಕಲಿ ದಾಖಲೆಗಳನ್ನು ನೀಡುವುದು. ಅರ್ಹತೆಗಾಗಿ ದಾಖಲೆಗಳನ್ನು ತಿದ್ದುವ ಅಪರಾಧಗಳನ್ನು‌ ಈ‌ ಕಾನೂನಿನ ವ್ಯಾಪ್ತಿಗೆ ತರಲಾಗಿದೆ.

ಈ ಕಾನೂನಿನಡಿ ಬರುವ ಅಪರಾಧಗಳು ಜಾಮೀನುರಹಿತ, ಹಾಗೂ ಉಪ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯಲ್ಲಿ ಬರುವ ಯಾವುದೇ ಅಧಿಕಾರಿಯು ಕಾಯಿದೆಯ ಅಡಿಯಲ್ಲಿ ಈ ಅಪರಾಧವನ್ನು ತನಿಖೆ ಮಾಡಬಹುದು.

ಕಾನೂನು ಸ್ಪರ್ಧಾತ್ಮಕ ಪರೀಕ್ಷೆಗಳಾದ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC), ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ಎಲ್ಲಾ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಒಳಗೊಂಡಿದೆ.

‘ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ‘ಡಾಲಿ’ ಧನಂಜಯ್

ಭಾರತ ತಂಡದ ಕೋಚ್ ಆಗುವ ಬಗ್ಗೆ ಗಂಭೀರ್ ಹೇಳಿದ್ದೇನು?

ಭಾರತೀಯ ಸಿಬ್ಬಂದಿ ಶೋಷಣೆ: ಬ್ರಿಟನ್‌ನ ಶ್ರೀಮಂತ ಹಿಂದುಜಾ ಕುಟುಂಬದ ನಾಲ್ವರು ಸದಸ್ಯರಿಗೆ 4 ವರ್ಷ ಜೈಲು ಶಿಕ್ಷೆ

TAGGED:#NET #Illegality #Central Government #Notification #Enact Public Examinations Act #newsics #India news
Share This Article
Facebook Twitter Copy Link Print
Previous Article ಚೈತ್ರಾ ಆಚಾರ್​ ಈಗ ಇನ್ನಷ್ಟು ಬೋಲ್ಡ್:ಫೋಟೋಶೂಟ್​ ವೈರಲ್​
Next Article ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿನ ಉಡುಗೊರೆಗಳ ಹರಾಜು ಶೀಘ್ರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?