newsics.com
ಶಿವಮೊಗ್ಗ : ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾರಣಾಂತರದಿಂದ ಕೇಸ್ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದರು. ಇದೀಗ ಮಹಿಳಾ ಠಾಣೆ ಪೊಲೀಸ್ ಸಿಪಿಐ ಭರತ್ ಕುಮಾರ್ ನೇತೃತ್ವದಲ್ಲಿ ಸಾಗರದ ನಿವಾಸದಲ್ಲಿ ಅರುಣ್ನನ್ನು ಅರೆಸ್ಟ್ ಮಾಡಲಾಗಿದೆ.
ಮದುವೆಯಾಗುತ್ತೇನೆ ಎಂದು ಹೇಳುತ್ತಾ, ಬಲಾತ್ಕಾರ ಮಾಡಿರುತ್ತಾನೆ. ಜೋಗ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ಆಮಿಷ ತೋರಿಸಿ ದೈಹಿಕ ಸಂಬಂಧ ಬೆಳೆಸಿರುತ್ತಾನೆ. ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ.ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿರುತ್ತಾನೆ ಎಂದು ಯುವತಿ ದೂರು ನೀಡಿದ್ದಾಳೆ.
ಸಾಗರದ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.