ಕೇರಳ ಇನ್ಮುಂದೆ ಕೇರಳಂ: ಹೆಸರು ಬದಲಾವಣೆ ಪ್ರಸ್ತಾವನೆಗೆ 2ನೇ ಬಾರಿ ವಿಧಾನಸಭೆ ಅಂಗೀಕಾರ

newsics.com ತಿರುವನಂತಪುರಂ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇರಳ ವಿಧಾನಸಭೆ 2ನೇ ಬಾರಿ ಅಂಗೀಕಾರ ನೀಡಿದೆ. ಕಳೆದ ವರ್ಷ ಆಗಸ್ಟ್ 9ರಂದು ಇದೇ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಇಡಲಾಗಿತ್ತು. ಸರ್ವಾನುಮತದಿಂದ ಈ ಪ್ರಸ್ತಾವನಗೆ ಅಂಗೀಕಾರ ದೊರಕಿತ್ತು. ಬಳಿಕ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಕೆಲ ಅಂಶಗಳ ತಿದ್ದುಪಡಿಗೆ ಸೂಚಿಸಿ ಪ್ರಸ್ತಾವನೆಯನ್ನು ಕೇರಳ ಸರ್ಕಾರಕ್ಕೆ ಹಿಂತಿರುಗಿಸಿತ್ತು. ಹೀಗಾಗಿ ತಿದ್ದುಪಡಿ ಮೂಲಕ ಕೇರಳ ವಿಧಾನಸಭೆಯಲ್ಲಿ 2ನೇ ಬಾರಿಗೆ ಪ್ರಸ್ತಾವನೆಗೆ ಅಂಗೀಕಾರ ಪಡೆಯಲಾಗಿದೆ. … Continue reading ಕೇರಳ ಇನ್ಮುಂದೆ ಕೇರಳಂ: ಹೆಸರು ಬದಲಾವಣೆ ಪ್ರಸ್ತಾವನೆಗೆ 2ನೇ ಬಾರಿ ವಿಧಾನಸಭೆ ಅಂಗೀಕಾರ