newsics.com
ಮಹಿಳಾ ಉದ್ಯೋಗಿ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಯುವತಿಯನ್ನು 37 ವರ್ಷದ ಸುರಭಿ ಜೈನ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸುರಭಿ ಜೈನ್ ಟಿಸಿಎಸ್ ಕಂಪನಿಯಲ್ಲಿ ಪ್ರೊಜೆಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದರು. ಇಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ಸುರಭಿ ಡೆತ್ ನೋಟ್ ಬರೆದಿದ್ದು, I am Sorry Daddy ಎಂದು ಬರೆಯಲಾಗಿತ್ತು.
ವಿಷಯ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಿದ್ದಾರೆ. ಎಂಟನೇ ಮಹಡಿಯಿಂದ ಜಿಗಿಯುತ್ತಿದ್ದಂತೆ ಯುವತಿ ಸಾವನ್ನಪ್ಪಿದ್ದಾಳೆ. ಎಲ್ಲಾ ಆಯಾಮದಲ್ಲಿಯೂ ತನಿಖೆ ಆರಂಭಿಸಲಾಗಿದೆ. ಯುವತಿಯ ಪೋಷಕರಿಂದಲೂ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಸಿ.ಬಿ.ಸಿಂಗ್ ಹೇಳಿದ್ದಾರೆ.