newsics. Com
ಬೆಂಗಳೂರು : ಅಂಗನವಾಡಿ ಕೇಂದ್ರಗಳನ್ನು ಮಾಂಟೆಸ್ಸರಿಗಳನ್ನಾಗಿ ಮೇಲ್ದರ್ಜೆಗೆ ಏರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರ ಜತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಯಿತು.
ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಮಾಡುತ್ತಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆ, ನಮ್ಮ ಇಲಾಖೆ ಜತೆ ಸಿಎಂ ಸಭೆ ಮಾಡಿದರು. ಗುಣಮಟ್ಟದ ಶಿಕ್ಷಣ ಕೊಡಲು ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ ಮಾಡಲಾಗ್ತಿದೆ.
ಅಂಗನವಾಡಿಗಳನ್ನು ಅಪ್ ಗ್ರೇಡ್ ಮಾಡಲು ಸಿಎಂ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಿಎಂ ಇದಕ್ಕೆ ಒಪ್ಪಿದ್ದಾರೆ. ಅಂಗನವಾಡಿಗಳನ್ನ ಇನ್ನು ಮುಂದೆ ಸರ್ಕಾರಿ ಮಾಂಟೆಸ್ಸರಿಗಳಾಗಿ ಅಪ್ ಗ್ರೇಡ್ ಮಾಡಲಾಗುತ್ತದೆ. ಇಲ್ಲಿ LKG, UKG ತರಗತಿಗಳನ್ನು ಕನ್ನಡ, ಇಂಗ್ಲಿಷ್ ಮಾಧ್ಯಮಗಳಲ್ಲಿ ಪ್ರಾರಂಭ ಮಾಡಲು ತೀರ್ಮಾನ ಮಾಡಲಾಗಿದೆ. ಮೊದಲ ಹಂತದಲ್ಲಿ 9 ಸಾವಿರ ಅಂಗನವಾಡಿಗಳನ್ನ ಮಾಂಟೆಸ್ಸರಿಗಳಾಗಿ ಅಪ್ ಗ್ರೇಡ್ ಮಾಡಲು ತೀರ್ಮಾನ ಮಾಡಲಾಗಿದೆ. ಮಾಂಟೆಸ್ಸರಿಗಳಲ್ಲಿ ಸಮವಸ್ತ್ರ, ಶೂ, ಬ್ಯಾಗ್‌ಗಳನ್ನು ನೀಡಲಾಗುತ್ತದೆ. ಎಲ್ಲಾ ಸಿದ್ದತೆ ಮಾಡಿಕೊಂಡು ಆರ್ಥಿಕ ಇಲಾಖೆ ಜೊತೆ ಮಾತನಾಡಲಾಗುವುದು ಎಂದು ಹೇಳಿದರು.