newsics.com
ನವದೆಹಲಿ :ಟಿ20 ವಿಶ್ವಕಪ್ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.
ಈ ಬಾರಿಯ ಟಿ20 ವಿಶ್ವಕಪ್ಗೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಸೂಚನೆ ನೀಡಿದ್ದರು. ಅಲ್ಲದೆ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದರು. ಆದರೆ ಟಿ20 ವಿಶ್ವಕಪ್ನ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯಾ ತಂಡದ ಲೆಕ್ಕಾಚಾರಗಳು ತಲೆಕೆಳಗಾಗಿದೆ. ಹೀಗಾಗಿ ಡೇವಿಡ್ ವಾರ್ನರ್ ನೋವಿನ ವಿದಾಯ ಹೇಳುವಂತಾಗಿದೆ.
ಡೇವಿಡ್ ವಾರ್ನರ್ ಮೂರು ಸ್ವರೂಪಗಳಲ್ಲೂ ವಿಶ್ವ ಚಾಂಪಿಯನ್ ತಂಡದ ಭಾಗವಾಗಿದ್ದರು. 2021 ರಲ್ಲಿ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದ ಡೇವಿಡ್ ವಾರ್ನರ್, 2023 ರಲ್ಲಿ ಏಕದಿನ ಮತ್ತು ಟೆಸ್ಟ್ ವಿಶ್ವ ಚಾಂಪಿಯನ್ಶಿಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗೆ ಮೂರು ಸ್ವರೂಪಗಳಲ್ಲೂ ಟ್ರೋಫಿ ಎತ್ತಿ ಹಿಡಿದ ಕೆಲವೇ ಕೆಲವು ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು.