Newsics.com
ಕೇರಳ : ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಈ ನಿರ್ಣಯವನ್ನು ಕೇಂದ್ರಕ್ಕೆ ಕಳುಹಿಸಿದ್ದು, ರಾಜ್ಯದ ಹೆಸರು ಬದಲಾವಣೆ ಆಗಬೇಕಾದರೆ ಕೇಂದ್ರ ಸರ್ಕಾರ ಇದಕ್ಕೆ ಅನುಮೋದನೆ ನೀಡಬೇಕು. ಈ ಹಿಂದೆಯೂ ಕೇರಳ ಇದೇ ರೀತಿ ನಿರ್ಣಯ ಮಂಡಿಸಿ ಕೇಂದ್ರಕ್ಕೆ ಕಳುಹಿಸಿದ್ದು, ಕೇಂದ್ರ ತಿದ್ದುಪಡಿಗಳನ್ನು ಸೂಚಿಸಿ ಅದನ್ನು ಹಿಂತಿರುಗಿಸಿತ್ತು.ನಿರ್ಣಯವನ್ನು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಕಳುಹಿಸಲಾಗುವುದು ಎಂದು ಕೇರಳ ಸರ್ಕಾರ ಹೇಳಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಸ್ತಾಪಿಸಿದ ನಿರ್ಣಯವು ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಎಲ್ಲಾ ಭಾಷೆಗಳಲ್ಲಿ ಕೇರಳದ ಹೆಸರನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ.
ನಿರ್ಣಯವನ್ನು ಮಂಡಿಸಿದ ಕೇರಳ ಸಿಎಂ, ರಾಜ್ಯವನ್ನು ಮಲಯಾಳಂ ಭಾಷೆಯಲ್ಲಿ ‘ಕೇರಳಂ’ ಎಂದು ಕರೆಯುತ್ತಾರೆ. ಮಲಯಾಳಿ ಭಾಷಿಕರಿಗಾಗಿ ಅಖಂಡ ಕೇರಳದ ಬೇಡಿಕೆ ದೇಶದ ಸ್ವಾತಂತ್ರ್ಯ ಹೋರಾಟದಿಂದಲೂ ಪ್ರಬಲವಾಗಿದೆ ಎಂದು ಹೇಳಿದ್ದಾರೆ. ನಮ್ಮ ರಾಜ್ಯದ ಹೆಸರನ್ನು ಸಂವಿಧಾನದ ಮೊದಲ ಶೆಡ್ಯೂಲ್ನಲ್ಲಿ ಕೇರಳ ಎಂದು ಬರೆಯಲಾಗಿದೆ. ಸಂವಿಧಾನದ 3 ನೇ ಪರಿಚ್ಛೇದದ ಅಡಿಯಲ್ಲಿ ‘ಕೇರಳಂ’ ಎಂದು ತಿದ್ದುಪಡಿ ಮಾಡಲು ಮತ್ತು ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಉಲ್ಲೇಖಿಸಲಾದ ಎಲ್ಲಾ ಭಾಷೆಗಳಲ್ಲಿ ‘ಕೇರಳಂ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಧಾನಸಭೆ ವಿನಂತಿ ಮಾಡುತ್ತಿದೆ” ಎಂದು ವಿಜಯನ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.