newsics.com
ಮುಂಬೈ : ನೂತನ ಸಂಸದೆ ಕಂಗನಾ ರಣಾವತ್ ತಮ್ಮ ಮುಂಬರುವ ಚಿತ್ರ ಎಮರ್ಜೆನ್ಸಿಯ ಡೇಟ್ ಘೋಷಣೆ ಮಾಡಿದ್ದಾರೆ.
ಮೊದಲ ಬಾರಿಗೇ ಸಂಸದೆಯಾಗಿ ಲೋಕಸಭೆಗೆ ಎಂಟ್ರಿ ಕೊಟ್ಟಿದ್ದಾರೆ ನಟಿ. ಇಲ್ಲಿ ಅದೃಷ್ಟ ಖುಲಾಯಿಸಿದೆ. ಸದ್ಯ ನಟಿಯ ಕೈಯಲ್ಲಿ ಎಮರ್ಜೆನ್ಸಿ ಚಿತ್ರವಿದೆ. ಅಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಪಾತ್ರ ನಿರ್ವಹಿಸಿದ್ದಾರೆ. 1975 ರಲ್ಲಿ ಭಾರತದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಘಟನೆಗಳನ್ನು ಆಧರಿಸಿದ ಚಿತ್ರವಿದು. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜೀವನದ ಸುತ್ತ ಸುತ್ತುತ್ತದೆ ಈ ಸಿನಿಮಾ. 1975ರಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗ ದೇಶದಲ್ಲಿ ಆಗಿರುವ ಅಲ್ಲೋಲ ಕಲ್ಲೋಲಗಳೇನು? ದೇಶ ಯಾವ ಸ್ಥಿತಿಗೆ ತಲುಪಿತ್ತು ಈ ಕುರಿತು ಎಳೆಎಳೆಯಾಗಿ ಚಿತ್ರ ಬಿಚ್ಚಿಟ್ಟಿರುವುದಾಗಿ ನಟಿ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕಂಗನಾ ಅವರು ಇಂದಿರಾ ಗಾಂಧಿಯ ಪಾತ್ರ ಮಾಡಿದ್ದಾರೆ.
ನಟಿ ಸೆಪ್ಟೆಂಬರ್ 6ರಂದು ಚಿತ್ರ ಬಿಡುಗಡೆಯಾಗಲಿದೆ ಎಂದಿದ್ದಾರೆ. ಇನ್ನಷ್ಟು ವಿಳಂಬ ಮಾಡದೇ ಚಿತ್ರ ಬೇಗ ರಿಲೀಸ್ ಮಾಡಿ ಸತ್ಯವನ್ನು ಜನರ ಮುಂದಿಡಿ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಜೂನ್ 25 ರಾಷ್ಟ್ರೀಯ ತುರ್ತು ಪರಿಸ್ಥಿತಿ ಕರಾಳ ನೆನಪಿಗೆ 50 ವರ್ಷವಾಗಿದೆ. ಜೂನ್ 25, 1975ರಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಅಂದಿನ ಪ್ರಧಾನಿ ಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಘೋಷಣೆ ಮಾಡಿದ್ದು, 21 ತಿಂಗಳು ಕಾಲ ತುರ್ತು ಪರಿಸ್ಥಿತಿ ಅಸ್ತಿತ್ವದಲ್ಲಿ ಇತ್ತು. 1975, ಜೂನ್ 25ರಂದು ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಿತ್ತು. ಈ ಕತಾ ಹಂದರವನ್ನು ಸಿನಿಮಾ ಹೊಂದಿದೆ.