newsics.com
ಮುಂಬೈ : ಕಾಲಿವುಡ್ ನಟ ಜಯಂ ರವಿ ದಾಂಪತ್ಯ ಬದುಕಿನಲ್ಲಿ ಬಿರುಕಾಗಿದೆ. ಇಬ್ಬರೂ ಡಿವೋರ್ಸ್‌ಗೆ ಮುಂದಾಗಿದ್ದಾರೆ ಎಂಬ ಸುದ್ದಿ ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಆರತಿ ಪತಿ ಜೊತೆಗಿನ ತನ್ನ ಎಲ್ಲಾ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ. ತನ್ನ ಹೆಸರಿನ ಜೊತೆಯಿದ್ದ ಪತಿಯ ಹೆಸರು ಜಯಂ ರವಿ ಎಂಬುದನ್ನು ಕೂಡ ತೆಗೆದು ಹಾಕಿದ್ದಾರೆ. ಈ ನಡೆ ಡಿವೋರ್ಸ್ ಸುದ್ದಿಗೆ ಪುಷ್ಠಿ ನೀಡಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಾರಾ ಎಂದು ಕಾಯಬೇಕಿದೆ.
ತಮಿಳು ಕಿರುತೆರೆಯ ಪ್ರಖ್ಯಾತ ನಿರ್ಮಾಪಕರಾದ ಸುಜಾತಾ ವಿಜಯ್ ಕುಮಾರ್ ಅವರ ಪುತ್ರಿ ಆರತಿ. ಪರಸ್ಪರ ಪ್ರೀತಿಸಿ ಜಯಂ ರವಿ ಹಾಗೂ ಆರತಿ 2009ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.