newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಬುಧವಾರ ಬೆಳಗ್ಗೆ ನಾಲ್ವರು ಮೃತಪಟ್ಟಿದ್ದಾರೆ.
ಈ ಪ್ರದೇಶದಲ್ಲಿ ಮಂಗಳವಾರ ರಾತ್ರಿಯಿಡೀ ಭಾರಿ ಮಳೆ ಸುರಿದಿತ್ತು. ಇದರಿಂದಾಗಿ ಅಬೂಬಕ್ಕರ್ ಎಂಬುವರ ಮನೆಯ ಗೋಡೆ ಕುಸಿದುಬಿದ್ದಿದೆ. ಮನೆಯೊಳಗಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40) ಹಾಗೂ ಮಕ್ಕಳಾದ ರಿಯಾನಾ ಮತ್ತು ರಿಫಾನ್ ಮೃತಪಟ್ಟಿದ್ದಾರೆ.
ಅಬೂಬಕ್ಕರ್ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿತವಾಗಿದ್ದು, ಯಾಸಿರ್ ಮನೆಯ ಗೋಡೆ ಮೇಲೆ ಬಿದ್ದು ಈ ಅವಘಡ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಯಾಸಿರ್ ಆರು ವರ್ಷಗಳ ಹಿಂದೆ ಮನೆಯನ್ನು ಖರೀದಿಸಿ, ಅದನ್ನು ಒಂದು ವರ್ಷಕ್ಕೆ ಬಾಡಿಗೆಗೆ ನೀಡಿದ್ದರು. ಆರು ತಿಂಗಳ ಹಿಂದೆ ಅವರೇ ವಾಸಕ್ಕೆ ಮರಳಿದ್ದರು.
ಮೃತ ಯಾಸಿರ್ ಬಂದರಿನಲ್ಲಿ ಕೆಲಸ ಮಾಡುತ್ತಿದ್ದರು. ರಿಹಾನಾ ಮತ್ತು ರಿಫಾನ್ ನಗರದ ಖಾಸಗಿ ಶಾಲೆ ಮತ್ತು ಕಾಲೇಜಿನಲ್ಲಿ ಓದುತ್ತಿದ್ದರು. ರಾತ್ರಿ ಊಟ ಮುಗಿಸಿ ಕುಟುಂಬಸ್ಥರು ಮಲಗಿದ್ದಾಗ ಈ ದುರಂತ ಸಂಭವಿಸಿದೆ.
ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ್ದಕ್ಕೆ ತ್ರಿವಳಿ ತಲಾಖ್: ಎಂಟು ವರ್ಷದ ದಾಂಪತ್ಯ ಅಂತ್ಯ
ಕೋಲಿನಿಂದ ಹೊಡೆದು ಅಲ್ಲಾ ಹು ಅಕ್ಬರ್ ಹೇಳಿಸಿದ್ರು: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು