ಕರಾವಳಿಯಲ್ಲಿ ಭಾರೀ ಮಳೆ: ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಬುಧವಾರ ಬೆಳಗ್ಗೆ ನಾಲ್ವರು‌ ಮೃತಪಟ್ಟಿದ್ದಾರೆ. ಈ ಪ್ರದೇಶದಲ್ಲಿ ಮಂಗಳವಾರ ರಾತ್ರಿಯಿಡೀ ಭಾರಿ ಮಳೆ ಸುರಿದಿತ್ತು. ಇದರಿಂದಾಗಿ ಅಬೂಬಕ್ಕರ್ ಎಂಬುವರ ಮನೆಯ ಗೋಡೆ ಕುಸಿದುಬಿದ್ದಿದೆ. ಮನೆಯೊಳಗಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40) ಹಾಗೂ ಮಕ್ಕಳಾದ ರಿಯಾನಾ ಮತ್ತು ರಿಫಾನ್ ಮೃತಪಟ್ಟಿದ್ದಾರೆ. ಅಬೂಬಕ್ಕರ್ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿತವಾಗಿದ್ದು, ಯಾಸಿರ್ ಮನೆಯ ಗೋಡೆ ಮೇಲೆ … Continue reading ಕರಾವಳಿಯಲ್ಲಿ ಭಾರೀ ಮಳೆ: ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು