newsics. Com
ಬೆಂಗಳೂರು : ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ.
ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದು, ಇದರಿಂದ ಸದ್ಯ ಪ್ರಜ್ವಲ್‌ಗೆ ಜೈಲೇ ಗತಿಯಾಗಿದೆ.
ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದರು. ಆದರೆ, ಪ್ರಜ್ವಲ್ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.