newsics. Com
ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿತನಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಿಕೊಂಡು ಬಂದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್ ಮಾಡಿದ್ದಾರೆ.
” ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂಬುದಾಗಿ ವಿಜಯಲಕ್ಷ್ಮೀ ದರ್ಶನ್ ಪೋಸ್ಟ್ ಮಾಡಿದ್ದಾರೆ.
ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ದರ್ಶನ್ ಅವರ ನೂರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.