newsics.com
ಬೆಂಗಳೂರು: ಪ್ರಜ್ವಲ್ ರೇವಣ್ಣ ಬಲವಂತವಾಗಿ ನನ್ನನು ಬೆತ್ತಲಾಗಿಸುತ್ತಿದ್ದರು ಎಂದು ನಾಲ್ಕನೇ ಸಂತ್ರಸ್ತೆ ನೀಡಿರುವ ದೂರಿನಲ್ಲಿ ಹೇಳಿದ್ದಾಳೆ.
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದೆ.
ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಹೆಸರು ಕೂಡ ತಳುಕು ಹಾಕಿಕೊಂಡಿದ್ದು, ಪೆನ್ ಡ್ರೈವ್ ಸೋರಿಕೆ ಪ್ರಕರಣದಲ್ಲಿ ಪ್ರೀತಂ ಗೌಡ ಹೆಸರು ಕೇಳಿಬಂದಿದೆ.
ಸಂತ್ರಸ್ತೆ ನೀಡಿರುವ ದೂರಿನಲ್ಲಿ ಮಗನ ಶಾಲೆ ವಿಚಾರಕ್ಕೆ ಭೇಟಿ ವೇಳೆ ಮೊಬೈಲ್ ನಂಬರ್ ಪಡೆದಿದ್ದ ಪ್ರಜ್ವಲ್ ನನಗೆ ವಿಡಿಯೊ ಕಾಲ್ ಮಾಡಿ ನಿತ್ಯ ಮಾತಾಡುತ್ತಿದ್ದರು. ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದರು. ಅನಿವಾರ್ಯವಾಗಿ ಬೆತ್ತಲಾಗುತ್ತಿದ್ದ ನನ್ನನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು.
ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ಅದನ್ನು ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.