newsics.com
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಜೂ.28ರಂದು ಎಲ್ಲಾ ಅಂಗನವಾಡಿ ಪ್ರಾಥಮಿಕ-ಪ್ರೌಢಶಾಲೆಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ (Karnataka weather Forecast) ಮಾಡಿದ್ದಾರೆ.
ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.
ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದ್ದು,ಜಂಗಲ್ ಲಾಡ್ಜಸ್‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದ್ದು, ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ.