ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ

newsics.com ಚೆನ್ನೈ: ಕರ್ನಾಟಕದ ಬೆಂಗಳೂರಿನಿಂದ ಕೇವಲ 4೦ ಕಿಲೋಮೀಟರ್‌ ದೂರದಲ್ಲಿರುವ, ತಮಿಳುನಾಡಿನ ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಘೋಷಣೆ ಮಾಡಿದ್ದಾರೆ. ಇದರಿಂದ ಬೆಂಗಳೂರಿನ ಜನತೆಗೂ ಅನುಕೂಲವಾಗಲಿದೆ. ಬೆಂಗಳೂರಿನಲ್ಲಿಯೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಎಂ.ಕೆ.ಸ್ಟಾಲಿನ್‌ ಅವರು ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಹೊಸೂರು ಹೆಚ್ಚಿನ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ. ಹಾಗಾಗಿ, … Continue reading ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ