newsics.com
ಮಧ್ಯಪ್ರದೇಶ :ಇಲ್ಲೊಬ್ಬಳು ಮಹಿಳೆ ಬಿಜೆಪಿ ಪಕ್ಷವನ್ನು ಬೆಂಬಲಿಸಿ ವೋಟ್ ಹಾಕಿದ್ದಕ್ಕೆ ಕೋಪಗೊಂಡ ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ಘಟನೆ ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಸುದ್ದಿ ಎಲ್ಲೆಡೆ ವೈರಲ್ ಆಗಿದೆ.
ದೂರಿನಲ್ಲಿ ಮಹಿಳೆ, ತಾನು ಸುಮಾರು ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದು, ಸ್ವಲ್ಪ ಸಮಯದ ನಂತರ ಅತ್ತೆ, ಪತಿ ಹಾಗೂ ನಾದಿನಿಯರು ಹಿಂಸೆ ನೀಡಿ ಆಕೆಯನ್ನು ಮನೆಯಿಂದ ಹೊರಹಾಕಿದ್ದಾರೆ. ಒಂದೂವರೆ ವರ್ಷದಿಂದ ಪತಿಯ ಜೊತೆ ಆಕೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳಂತೆ. ಆದರೆ ಮಹಿಳೆ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಅದರ ಪರವಾಗಿ ಮತ ಹಾಕಿದ್ದಕ್ಕೆ ಕೋಪಗೊಂಡ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ್ದಾನೆ ಎಂಬುದಾಗಿ ತಿಳಿಸಿದ್ದಾಳೆ.
ಆಕೆಯ ಪತಿ, ಅತ್ತೆ ಹಾಗೂ ನಾದಿನಿಯರ ವಿರುದ್ಧ ವರದಕ್ಷಿಣ ನಿಷೇಧ ಕಾಯಿದೆ, ಮುಸ್ಲಿಂ ಮಹಿಳೆಯರ ಕಾಯ್ದೆ ಮತ್ತು ಭಾರತೀಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.