ಹೃದಯಾಘಾತದಿಂದ 24 ವರ್ಷದ ಯುವತಿ ಸಾವು

newsics.com ಕೊಡಗು: ಇಂದು ಬೆಳಗ್ಗೆ ಯುವತಿಯೊಬ್ಬರು ಹೃದಯಾಘಾತದಿಂದ ‌ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು‌ ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಕೆಲಸಕ್ಕೆ ಹಾಜರಾಗಬೇಕು ಎಂದು ಇಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ