newsics.com
ಬೆಂಗಳೂರು: ಗೋಬಿ, ಕಬಾಬ್, ಪಾನಿಪುರಿ ಬಳಿಕ ಶವರ್ಮಾಗೂ ಕಂಟಕ ಎದುರಾಗಿದೆ. ಶವರ್ಮಾದಲ್ಲೂ ಅಪಾಯಕಾರಿ ಬಾಕ್ಟೀರಿಯಾ ಪತ್ತೆಯಾಗಿದೆ. ಶವರ್ಮಾ ಬ್ಯಾನ್ಗೆ ಆಹಾರ & ಗುಣಮಟ್ಟ ಇಲಾಖೆ ಚಿಂತನೆ ನಡೆಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಟೆಸ್ಟ್ನಲ್ಲಿ ಗೋಬಿ ಮಂಚೂರಿ, ಪಾನಿಪುರಿ ಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರಿಕೊಂಡಿದೆ.
ಆಹಾರ & ಗುಣಮಟ್ಟ ಇಲಾಖೆಯು ರಾಜ್ಯದ ವಿವಿಧೆಡೆಯಿಂದ 17 ಶವರ್ಮಾ ಮಾದರಿ ಪರೀಕ್ಷೆ ನಡೆಸಿದ್ದು. 17ರ ಪೈಕಿ 8 ಮಾದರಿಯಲ್ಲಿ ಬ್ಯಾಕ್ಟೀರಿಯಾ ಈಸ್ಟ್ ಪತ್ತೆಯಾಗಿದೆ. ಸರಿಯಾದ ರೀತಿಯಲ್ಲಿ ಆಹಾರ ತಯಾರಿಸದ ಕಾರಣ ಬಾಕ್ಟೀರಿಯಾಗಳು ಪತ್ತೆಯಾಗಿವೆ. ಈಗಾಗಲೇ ಅಸುರಕ್ಷಿತ ಶವರ್ಮಾ ನೀಡಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಎಲ್ಲಾ ಶವರ್ಮಾ ಮಾರಾಟಗಾರರಿಗೆ FSSAI ನೋಂದಣಿ ಕಡ್ಡಾಯಗೊಳಿಸಲಾಗಿದೆ. ನೋಂದಣಿ ಪತ್ರ ಪ್ರದರ್ಶನ ಮಾಡದಿದ್ರೆ ಮಾರಾಟಕ್ಕೆ ಬ್ಯಾನ್ ಮಾಡುವ ಎಚ್ಚರಿಕೆ ನೀಡಲಾಗಿದೆ. ಶವರ್ಮಾ ತಯಾರಿಕೆ ವೇಳೆ ಶುಚಿತ್ವ ಕಾಪಾಡುವಂತೆ ಸೂಚನೆ ನೀಡಲಾಗಿದ್ದು ಶುಚಿತ್ವ ನಿರ್ವಹಣೆ, ನೋಂದಣಿ ಮಾಡಿಸದಿದ್ರೆ ಕ್ರಮದ ಎಚ್ಚರಿಕೆ ನೀಡಲಾಗಿದೆ.