Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದೆಲ್ಲೆಡೆ ವಿಶ್ವಕಪ್ ಗೆದ್ದ ಸಂಭ್ರಮ, ಪ್ರಧಾನಿ ಅಭಿನಂದನೆ, T20 ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಣೆ
ದೇಶಪ್ರಮುಖ

ದೇಶದೆಲ್ಲೆಡೆ ವಿಶ್ವಕಪ್ ಗೆದ್ದ ಸಂಭ್ರಮ, ಪ್ರಧಾನಿ ಅಭಿನಂದನೆ, T20 ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಣೆ

Share
4 Min Read
SHARE

newsics.com

ಬಾರ್ಬಡೊಸ್: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ ದೇಶದೆಲ್ಲೆಡೆ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.

ಪ್ರಧಾನಿ ನರೇಂದ್ರ ಮೋದಿ ಕಪ್ ಸ್ಟೈಲ್‌ನಲ್ಲಿ ಮನೆಗೆ ತಂದ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಚಾಂಪಿಯನ್ಸ್!
ನಮ್ಮ ತಂಡವು T20 ವಿಶ್ವಕಪ್ ಅನ್ನು ಶೈಲಿಯಲ್ಲಿ ಮನೆಗೆ ತಂದಿದೆ!
ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಅಭಿನಂದಿಸಿದ್ದಾರೆ.

CHAMPIONS!

Our team brings the T20 World Cup home in STYLE!

We are proud of the Indian Cricket Team.

This match was HISTORIC. 🇮🇳 🏏 🏆 pic.twitter.com/HhaKGwwEDt

— Narendra Modi (@narendramodi) June 29, 2024

ಗೆಲುವಿನ ಸಂಭ್ರಮದಲ್ಲಿರುವಾಗಲೇ ಇದು ನನ್ನ ಕೊನೆಯ ಟಿ20‌ ಪಂದ್ಯ ಎಂದು T20 ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ.

ಕ್ರಿಕೆಟ್‌ ಜಗತ್ತಿನ ಅತಿದೊಡ್ಡ ಚೋಕರ್ಸ್ ಎಂದು ಟೀಕೆಗೆ ಗುರಿಯಾಗಿದ್ದ ದಕ್ಷಿಣ ಆಫ್ರಿಕಾ ತಂಡ ಮತ್ತೊಮ್ಮೆ ಪ್ರಶಸ್ತಿಯ ಹೊಸ್ತಿಲಿಗೆ ಬಂದು ಎಡವಿತು.

ಕಳೆದೊಂದು ದಶಕದಿಂದ ಐಸಿಸಿ ಟ್ರೋಫಿ ಬರ ಎದುರಿಸಿದ್ದ ಭಾರತ ತಂಡಕ್ಕೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಐಸಿಸಿ ಟ್ರೋಫಿ ಒಲಿದಿದೆ. ಮಹೇಂದ್ರ ಸಿಂಗ್ ಧೋನಿ ಬಳಿಕ ಐಸಿಸಿ ಟ್ರೋಫಿ ಗೆದ್ದ ಮೊದಲ ನಾಯಕ ಎನ್ನುವ ಹಿರಿಮೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಗೆಲ್ಲಲು 177 ರನ್‌ ಸವಾಲಿನ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ರೀಜಾ ಹೆಂಡ್ರಿಕ್ಸ್‌ 4 ರನ್ ಗಳಿಸಿ ಜಸ್ಪ್ರೀತ್ ಬುಮ್ರಾ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.

ಇದರ ಬೆನ್ನಲ್ಲೇ ನಾಯಕ ಏಯ್ಡನ್ ಮಾರ್ಕ್‌ರಮ್ ಕೇವಲ 4 ರನ್‌ಗಳಿಸಿ ಆರ್ಶದೀಪ್ ಸಿಂಗ್ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

ಕೇವಲ 12 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಮೂರನೇ ವಿಕೆಟ್‌ಗೆ ಕ್ವಿಂಟನ್ ಡಿ ಕಾಕ್ ಹಾಗೂ ಟ್ರಿಸ್ಟಿನ್ ಸ್ಟಬ್ಸ್‌ ಕೇವಲ 38 ಎಸೆತಗಳಲ್ಲಿ 58 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಸ್ಟಬ್ಸ್‌ 21 ಎಸೆತಗಳನ್ನು ಎದುರಿಸಿ 31 ರನ್ ಸಿಡಿಸಿ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಆಟವಾಡಿದ ಕ್ವಿಂಟನ್ ಡಿ ಕಾಕ್ 31 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 39 ರನ್ ಬಾರಿಸಿ ಆರ್ಶದೀಪ್‌ಗೆ ಎರಡನೇ ಬಲಿಯಾದರು.

ಸ್ಟಬ್ಸ್‌ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಹೆನ್ರಿಚ್ ಕ್ಲಾಸೇನ್ ಪಂದ್ಯದ ದಿಕ್ಕನ್ನೇ ಬದಲಿಸಿದರು. ಆರಂಭದಿಂದಲೇ ಕುಲ್ದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ ಮೇಲೆ ಕ್ಲಾಸೇನ್ ಸವಾರಿ ಮಾಡಿದರು.

ಅದರಲ್ಲೂ 15ನೇ ಓವರ್‌ ಎಸೆತದ ಅಕ್ಷರ್ ಪಟೇಲ್ ಒಂದೇ ಓವರ್‌ನಲ್ಲಿ ಕ್ಲಾಸೇನ್ ತಲಾ 2 ಸಿಕ್ಸರ್ ಹಾಗೂ ಬೌಂಡರಿ ಸಹಿತ 24 ರನ್ ಬಾರಿಸಿ ಪಂದ್ಯ ದಕ್ಷಿಣ ಆಫ್ರಿಕಾ ಪರ ವಾಲುವಂತೆ ಮಾಡಿದರು.

ಕ್ಲಾಸೇನ್ ಕೇವಲ 23 ಎಸೆತಗಳನ್ನು ಎದುರಿಸಿ ಆಕರ್ಷಕ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಕ್ಲಾಸೇನ್ 27 ಎಸೆತಗಳನ್ನು 2 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 52 ರನ್ ಬಾರಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.

ಕೊನೆಯ ಓವರ್‌ನಲ್ಲಿ ದಕ್ಷಿಣ ಆಫ್ರಿಕಾ ಗೆಲ್ಲಲು 16 ರನ್ ಬೇಕಿತ್ತು. 20ನೇ ಓವರ್‌ ದಾಳಿಗಿಳಿದ ಹಾರ್ದಿಕ್ ಪಾಂಡ್ಯ, ಡೇಂಜರ್ಸ್ ಡೇವಿಡ್ ಮಿಲ್ಲರ್(21) ಅವರನ್ನು ಬಲಿ ಪಡೆದರು. ಸೂರ್ಯಕುಮಾರ್ ಯಾದವ್ ಹಿಡಿದ ಭರ್ಜರಿ ಕ್ಯಾಚ್‌ಗೆ ಮಿಲ್ಲರ್ ಪೆವಿಲಿಯನ್ ಹಾದಿ ಹಿಡಿದರು.

ಇದಾದ ಬಳಿಕ ರಬಾಡ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದರಾದರೂ ಆ ಬಳಿಕ ಪಾಂಡ್ಯ, ಹರಿಣಗಳನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.

ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಪವರ್‌ಪ್ಲೇನೊಳಗೆ 34 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂರು ವಿಕೆಟ್ ಕಳೆದುಕೊಂಡು ಕಂಗಾಲಾಗಿ ಹೋಯಿತು.

ಆದರೆ ನಾಲ್ಕನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಅಕ್ಷರ್ ಪಟೇಲ್ ಜೋಡಿ ಕೇವಲ 54 ಎಸೆತಗಳನ್ನು ಎದುರಿಸಿ ಅಮೂಲ್ಯ 72 ರನ್‌ಗಳ ಜತೆಯಾಟವಾಡಿದರು.

ಅಕ್ಷರ್ ಪಟೇಲ್ 31 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ 4 ಆಕರ್ಷಕ ಸಿಕ್ಸರ್‌ಗಳ ನೆರವಿನಿಂದ 47 ರನ್‌ಗಳಿಸಿ ನಾನ್‌ಸ್ಟ್ರೈಕ್‌ನಲ್ಲಿ ರನೌಟ್ ಆಗಿ ಪೆವಿಲಿಯನ್ ಸೇರಿದರು.

ಈ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ ಫೈನಲ್ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ 48 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದ ವಿರಾಟ್ ಕೊಹ್ಲಿ, ಆ ಬಳಿಕ ಸ್ಪೋಟಕ ಇನಿಂಗ್ಸ್‌ ಆಡಿದರು.

ಅಂತಿಮವಾಗಿ ಕೊಹ್ಲಿ 59 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್ ಸಿಡಿಸಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಇನ್ನು ಕೊನೆಯಲ್ಲಿ ಶಿವಂ ದುಬೆ 27 ರನ್ ಸಿಡಿಸಿ ತಂಡದ ಮೊತ್ತವನ್ನು 170ರ ಗಡಿ ದಾಟುವಂತೆ ಮಾಡಿದರು.

https://x.com/IndianTechGuide/status/1807117527090163713?t=dWR5YkIgTYJ7w35mZEyIzA&s=08

13 ವರ್ಷ ಬಳಿಕ T20 ವಿಶ್ವಕಪ್ 2024‌ ಗೆದ್ದು ಬೀಗಿದ ರೋಹಿತ್ ಪಡೆ

T20 World cup 2024 ದೆಹಲಿ ಏರ್‌ಪೋರ್ಟ್‌ನಲ್ಲಿ ಅಂತಿಮ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ, ವಿಡಿಯೋ ವೈರಲ್

TAGGED:announcing Kohli's retirement from international cricketCelebrating winning the World Cup all over the countrycongratulating the Prime Minister
Share This Article
Facebook Twitter Copy Link Print
Previous Article 13 ವರ್ಷ ಬಳಿಕ T20 ವಿಶ್ವಕಪ್ 2024‌ ಗೆದ್ದು ಬೀಗಿದ ರೋಹಿತ್ ಪಡೆ
Next Article ಟಿ20 ವಿಶ್ವಕಪ್: ಭಾರತೀಯರ ಕನಸು ನನಸು, ದಕ್ಷಿಣ ಆಫ್ರಿಕಾಗೆ ಮುಖಭಂಗ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?