newsics.com
ನವದೆಹಲಿ: 13 ವರ್ಷಗಳ ನಂತರ 140 ಕೋಟಿ ಭಾರತೀಯರ ಕನಸು ನನಸಾಗಿದೆ.
9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ.
ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು.
ಆದರೆ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಅಜೇಯ ತಂಡವಾಗಿ ಫೈನಲ್ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.
ಆದರೆ ಗೆಲುವಿನ ಖುಷಿಯಲ್ಲಿರುವ ಭಾರತ ಹಾಗೂ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.
https://x.com/IndianTechGuide/status/1807117527090163713?t=dWR5YkIgTYJ7w35mZEyIzA&s=08
ದೇಶದೆಲ್ಲೆಡೆ ವಿಶ್ವಕಪ್ ಗೆದ್ದ ಸಂಭ್ರಮ, ಪ್ರಧಾನಿ ಅಭಿನಂದನೆ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಣೆ