ಬೆಂಗಳೂರು: ಮಡಿವಾಳ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಮಾಡಿಕೊಂಡಿದ್ದ ಮೃತದೇಹ ಪತ್ತೆ ಮಾಡಿದ್ದೇ ರೋಚಕ ಘಟನೆಯಾಗಿದೆ. ಶಿವರಾಜ್ ಮೃತದೇಹ ಪತ್ತೆ ಮಾಡೋಕೆ ಬರೋಬ್ಬರಿ 250 ಸಿಸಿಟಿವಿಯನ್ನು ಮಡಿವಾಳ ಪೊಲೀಸರು ಪರಿಶೀಲನೆ ಮಾಡಿದ್ದಾರೆ.
ಸುಬ್ರಮಣ್ಯಪುರ ಪೊಲೀಸರು ಹಾಗೂ ಮಡಿವಾಳ ಪೊಲೀಸರಿಂದ ಶಿವರಾಜ್‌ಗಾಗಿ ಹುಡುಕಾಟ ನಡೆದಿತ್ತು. ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ವರೆಗೂ ಸಿಸಿಟಿವಿ ಪರಿಶೀಲನೆ ಮಾಡಲಾಗಿತ್ತು. ಸತತ ಐದು ದಿನಗಳಿಂದ ನಿರಂತರವಾಗಿ ಹುಡುಕಾಟ ನಡೆಸಿದ್ದ ಪೊಲೀಸರು ಕೊನೆಗೆ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ಗೆ ಬಂದು ತಲುಪಿದ್ದಾರೆ. ಈ ವೇಳೆ ಮೆಟ್ರೊ ಸ್ಟೇಷನ್ ಪಾರ್ಕಿಂಗ್‌ನಲ್ಲಿ ಬೈಕ್ ನಿಲ್ಲಿಸಿದ್ದ ಶಿವರಾಜ್ ನಂತರ ನೀರಿನ ಬಾಟಲಿ ಹಿಡಿದು ಬೆಂಗಳೂರು ವಿವಿ ಒಳಗೆ ನಡೆದು ಬಂದಿದ್ದರು
ಶಿವರಾಜ್ ಬೆಂಗಳೂರು ವಿವಿ ಒಳಗೆ ನಡೆದು ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹೀಗಾಗಿ ಬೆಂಗಳೂರು ವಿವಿ ಆವರಣದೊಳಗೆ ಹುಡುಕಾಡಿದ್ದ ಸಂದರ್ಭ ಆವರಣದ ಪಾಳು ಬಿದ್ದ ಬಾವಿಯಲ್ಲಿ ಶಿವರಾಜ್ ಮೃತದೇಹ ತೇಲುತ್ತಿರುವುದು ಪತ್ತೆಯಾಗಿದೆ. ಕೂಡಲೇ ಜ್ಞಾನಭಾರತಿ ಪೊಲೀಸರಿಗೆ ಮಾಹಿತಿ ನೀಡಿದ್ದ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹ ಹೊರತೆಗೆಸಿದಾಗ ದೇಹಕ್ಕೆ ಕಲ್ಲು ಕಟ್ಟಿರೋದು ಬೆಳಕಿಗೆ ಬಂದಿದೆ. ಬಳಿಕ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಶಿವರಾಜ್ ಸಿಸಿಟಿಯಲ್ಲಿ ಒಬ್ಬನೇ ಬಂದಿರುವುದರಿಂದ ಇದೊಂದು ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಪೊಲೀಸರು.