newsics.com
ಬೆಂಗಳೂರು : ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಮರು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಮೂರು ತಿಂಗಳಿಂದ ಯಾವುದೇ ಹುದ್ದೆಯನ್ನು ಹೊಂದಿರಲಿಲ್ಲ. ಅವರ ಪತ್ನಿ ಅಂಜಲಿನಿಂಬಾಳ್ಕರ್ ಚುನಾವಣೆಗೆ ಸ್ಪರ್ಧಿಸಿದ್ದ ಕಾರಣ ಈ ನಿಯೋಜನೆ ಮಾಡಲಾಗಿತ್ತು. ಇದೀಗ ಅವರಿಗೆ ಸ್ಥಾನ ನೀಡಲಾಗಿದೆ.
ಹೇಮಂತ್ ಅವರು ಅಧಿಕಾರ ವಹಿಸಿಕೊಳ್ಳಲಿರುವ ಕಾರಣ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.