newsics.com
ಬೆಂಗಳೂರು : ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಈಗ ನಿತ್ಯದ ಕೆಲಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಂಡು ಇಡೀ ದಿನದ ರಜೆ ನೀಡಲು ಆದೇಶಿಸಲಾಗಿದೆ.
ವಾರದ ಒಂದು ದಿನ ಸಂಪೂರ್ಣ ರಜೆ ನೀಡಬೇಕು ಎಂದು ಪೌರ ಕಾರ್ಮಿಕರು ಒತ್ತಾಯಿಸುತ್ತಿದ್ದರು. ಈ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ವಾರದಲ್ಲಿ ಒಂದು ದಿನ ಸಂಪೂರ್ಣ ರಜೆಯನ್ನು ನೀಡಿ ಆದೇಶ ಹೊರಡಿಸಿದೆ. ಕೆಲವು ಷರತ್ತು ವಿಧಿಸಿದೆ.