Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು
Uncategorizedದೇಶ

ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು

Share
1 Min Read
SHARE

newsics. com

ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 116 ಮಂದಿ ಬಲಿಯಾಗಿದ್ದಾರೆ. ಸತ್ಸಂಗ ಕಾರ್ಯಕ್ರಮದ ಕೇಂದ್ರಬಿಂದು ಆಗಿರುವ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಅವರು ನಾಪತ್ತೆಯಾಗಿದ್ದಾರೆ.

ಉತ್ತರ ಪ್ರದೇಶದ ಇಟಾ ಜಿಲ್ಲೆಯ ಬಹದ್ದೂರ್ ನಗರಿ ಗ್ರಾಮದ ರೈತ ನನ್ನೆ ಲಾಲ್ ಮತ್ತು ಕಟೋರಿ ದೇವಿಯವರ ಮಗನಾಗಿ ಜನಿಸಿದ್ದರು. ಗುರು ಭೋಲೆ ಬಾಬಾ ಅವರ ಮೂಲ ಹೆಸರು ಸೂರಾಜ್‌ ಪಾಲ್‌. ಇವರಿಗೆ ಇಬ್ಬರು ಸಹೋದರರಿದ್ದು ಒಬ್ಬರು ಮೃತಪಟ್ಟಿದ್ದಾರೆ.

ಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ನಂತರ ಕಾಲೇಜ್‌ ಶಿಕ್ಷಣ ಓದಿ ಉತ್ತರ ಪ್ರದೇಶ ಪೊಲೀಸ್‌ನ ಸ್ಥಳೀಯ ಗುಪ್ತಚರ ಘಟಕದಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ನೇಮಕಗೊಂಡಿದ್ದರು. ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾಗ ಇವರ ಮನಸ್ಸು ಆಧ್ಯಾತ್ಮಿಕತೆಯ ಕಡೆಗೆ ತಿರುಗಿತು. 1999 ರಲ್ಲಿ ಪೊಲೀಸ್ ಕೆಲಸವನ್ನು ತೊರೆದ ಬಳಿಕ ತನ್ನ ಹೆಸರನ್ನು ನಾರಾಯಣ್ ಸಾಕರ್ ಹರಿ ಎಂದು ಬದಲಾಯಿಸಿ ಧಾರ್ಮಿಕ ಉಪನ್ಯಾಸ ನೀಡಲು ಆರಂಭಿಸಿದರು.

ಇವರು ಕೇಸರಿ ಬಟ್ಟೆಯನ್ನು ಧರಿಸುತ್ತಿರಲಿಲ್ಲ. ಬಿಳಿ ಬಣ್ಣದ ಶರ್ಟ್‌ ಮತ್ತು ಪ್ಯಾಂಟ್‌ ಧರಿಸುತ್ತಿದ್ದರು. ತನಗೆ ಸಿಕ್ಕಿದ ದೇಣಿಗೆಯನ್ನು ನಾನು ಇಟ್ಟುಕೊಳ್ಳುವುದಿಲ್ಲ. ಅದನ್ನು ಭಕ್ತರಿಗೆ ನೀಡುತ್ತೇನೆಂದು ಭೋಲೆ ಬಾಬಾ ಉಪದೇಶದಲ್ಲಿ ಹೇಳುತ್ತಿರುತ್ತಾರೆ. ಅಷ್ಟೇ ಅಲ್ಲದೇ ವೇದಿಕೆಯಲ್ಲಿ ಉಪನ್ಯಾಸ ನೀಡುವಾಗ ಹತ್ತಿರದಲ್ಲೇ ಪತ್ನಿ ಸಹ ಇರುತ್ತಾರೆ.

ನಾನು ಹರಿ(ವಿಷ್ಣು) ಭಕ್ತ ಎಂದು ಹೇಳಿಕೊಳ್ಳುವ ಇವರಿಗೆ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಅನುಯಾಯಿಗಳನ್ನು ಹೊಂದಿದ್ದಾರೆ. ಕಾಲ್ತುಳಿತವಾದ ನಂತರ ಭೋಲೆ ಬಾಬಾ ನಾಪತ್ತೆಯಾಗಿದ್ದು ಅವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

TAGGED:116 killed in Hathraslatest newsnewsicssatsang – then head constablesatsang programself-proclaimed guru
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಪ್ರಕರಣ: ಪ್ಲೇಟ್‌ಲೆಟ್‌ಗಳಿಗೆ ಭಾರೀ ಬೇಡಿಕೆ, ಮತ್ತಷ್ಟು ಆತಂಕ
Next Article ಪಂದ್ಯ ವೀಕ್ಷಣೆಗಾಗಿ ಅಂತ್ಯಕ್ರಿಯೆಯನ್ನೇ ಮುಂದೂಡಿದರು, ಶವದ ಪಕ್ಕ ಕುಳಿತು ಟಿವಿಯಲ್ಲಿ ಮ್ಯಾಚ್ ನೋಡಿದರು…!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?