Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್
ದೇಶಪ್ರಮುಖ

ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್

Share
1 Min Read
SHARE

newsics.com

ನವದೆಹಲಿ: ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರನ್ನು ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿರುವಂತೆಯೇ ಬೆಂಗಳೂರಿನ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಜೂನ್ 6ರಂದು ದೆಹಲಿಗೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಂಗನಾ ಅವರ ಕಪಾಳಕ್ಕೆ ಹೊಡೆದಿದ್ದ ಘಟನೆ ನಂತರ ಕೌರ್ ಅವರನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಅಮಾನತುಗೊಳಿಸಿತ್ತು. ಸಿಐಎಸ್‌ಎಫ್ ದೂರಿನ ಮೇರೆಗೆ ಕಾನ್‌ಸ್ಟೆಬಲ್ ವಿರುದ್ಧ ಪೊಲೀಸ್ ಎಫ್‌ಐಆರ್ ಕೂಡ ದಾಖಲಾಗಿದೆ.

ಕೌರ್ ಅವರನ್ನು ಅಮಾನತುಗೊಳಿಸಲಾಗಿದ್ದು, ಶಿಸ್ತು ಉಲ್ಲಂಘನೆ ಬಾಕಿ ಇರುವಂತೆ ಅವರನ್ನು ಬೆಂಗಳೂರಿನ 10ನೇ ಮೀಸಲು ಬೆಟಾಲಿಯನ್‌ಗೆ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯಾಯಯುತ ತನಿಖೆ ನಿಟ್ಟಿನಲ್ಲಿ ಘಟನೆ ನಡೆದ ಕೂಡಲೇ ಅವರನ್ನು ಘಟಕಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಿರಿಯ ಕಮಾಂಡೆಂಟ್ ದರ್ಜೆಯ ಅಧಿಕಾರಿಯೊಬ್ಬರು ವಿಚಾರಣೆ ನಡೆಸುತ್ತಿದ್ದು, ಆ ದಿನ ವಿಮಾನ ನಿಲ್ದಾಣದಲ್ಲಿದ್ದ ಕಾನ್‌ಸ್ಟೆಬಲ್, ಆಕೆಯ ಸಹೋದ್ಯೋಗಿಗಳು, ಶಿಫ್ಟ್ ಇನ್‌ಚಾರ್ಜ್ ಮತ್ತು ಕೆಲವು ವಿಮಾನ ನಿಲ್ದಾಣದ ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ವಿಚಾರಣೆಗೆ ಸ್ವಲ್ಪ ಸಮಯ ಹಿಡಿಯಲಿದ್ದು, ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಪಂಜಾಬ್‌ನ ಕಪುರ್ತಲಾ ಜಿಲ್ಲೆಯವರಾದ ಕೌರ್ ಅವರು 2009 ರಲ್ಲಿ CISFಗೆ ಸೇರ್ಪಡೆಗೊಂಡಿದ್ದರು. 2021ರಿಂದ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಅದರ ವೈಮಾನಿಕ ಭದ್ರತಾ ಗುಂಪಿನೊಂದಿಗೆ ಇದ್ದಾರೆ. ಅವರಿಗೆ ಇದುವರೆಗೂ ಫೋರ್ಸ್‌ನಲ್ಲಿ ಯಾವುದೇ ವಿಚಾರಣೆ ಅಥವಾ ಶಿಕ್ಷೆಯನ್ನು ನೀಡಲಾಗಿಲ್ಲ. ಆಕೆಯ ಪತಿಯನ್ನೂ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿತ್ತು.

ದೇಶದಲ್ಲಿ ನಡೆದ ರೈತರ ಪ್ರತಿಭಟನೆಗಳ ಬಗ್ಗೆ ಕಂಗನಾ ಅವರ ನಿಲುವಿನ ಬಗ್ಗೆ ಅಸಮಾಧಾನಗೊಂಡು ಕಪಾಳಮೋಕ್ಷ ಮಾಡಿರುವುದಾಗಿ ಕೌರ್ ಹೇಳಿದ್ದಾರೆ.

38 ವರ್ಷದ ಕಂಗನಾ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ಬಿಜೆಪಿ ಹಿರಿಯ ನಾಯಕ ಎಲ್‌‌‌‌. ಕೆ. ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಡೆಂಗ್ಯೂ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 600 ರೂ. ನಿಗದಿ: ಸರ್ಕಾರ ಆದೇಶ

ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?

TAGGED:CISF Constable Kaurwas transferred to Bangalore Airport.who slapped Kangana on the forehead
Share This Article
Facebook Twitter Copy Link Print
Previous Article ಬಿಜೆಪಿ ಹಿರಿಯ ನಾಯಕ ಎಲ್‌‌‌‌. ಕೆ. ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Next Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಚತುರ್ದಶಿ, ಗುರುವಾರ, 4-7-2024

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?