newsic.com
ಉಡುಪಿ : ರಾಜ್ಯಾದ್ಯಂತ ವರುಣ ಆರ್ಭಟ ಜೋರಾಗಿದೆ. ಅದರಲ್ಲೂ ಉಡುಪಿ(Udupi) ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆ(Rain)ಗೆ ಅವಾಂತರಗಳು ಸೃಷ್ಟಿಯಾಗಿದ್ದು, ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.
ಇನ್ನು ಉಡುಪಿಯಲ್ಲಿ ಇಂದು(ಗುರುವಾರ) ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ 45 ವರ್ಷದ ಮಹಿಳೆಯೊಬ್ಬರು ಉಸುರುಗಟ್ಟಿ ಸಾವನ್ನಪ್ಪಿದ್ದರು. ಇತ್ತ ಉತ್ತರ ಕನ್ನಡದಲ್ಲೂ ಮಳೆಗೆ ಗುಡ್ಡ ಕುಸಿದು ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿತ್ತು.