newsics.com
ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿ ಅವಘಡಗಳಲ್ಲಿ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಜುಲೈ 5 ಶುಕ್ರವಾರ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕುಗಳ ಶಾಲಾ- ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಕುಂದಾಪುರ ಉಪ-ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಶಾಲೆಗಳಿಗೂ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.
ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ
ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286 ಮಂದಿಗೆ ಡೆಂಗ್ಯೂ ಸೋಂಕು
ಫಸ್ಟ್ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್