newsics.com
ನವದೆಹಲಿ: ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ವಿವಾಹಕ್ಕೆ ದಿನಗಣನೆ ಆರಂಭವಾಗಿದೆ.
ಜುಲೈ 12ರಂದು ಮುಂಬೈನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಜೋಡಿಯು ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಹಾಗಾಗಿ, ಗುರುವಾರ (ಜುಲೈ 4) ಮುಕೇಶ್ ಅಂಬಾನಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ, ಮಗನ ಮದುವೆಗೆ ಆಹ್ವಾನಿಸಿದ್ದಾರೆ.
ನವದೆಹಲಿಯ 10 ಜನಪಥದಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ ಮುಕೇಶ್ ಅಂಬಾನಿ ಅವರು ಕಾಂಗ್ರೆಸ್ ನಾಯಕಿಯನ್ನು ಮದುವೆಗೆ ಆಹ್ವಾನಿಸಿದ್ದಾರೆ. ಅದ್ಧೂರಿಯಾಗಿ ನಡೆಯುವ ವಿವಾಹ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ನೂರಾರು ರಾಜಕಾರಣಿಗಳು, ಬಾಲಿವುಡ್ ನಟ-ನಟಿಯರು, ಕ್ರಿಕೆಟಿಗರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಬಹುತೇಕ ಜನರಿಗೆ ಮುಕೇಶ್ ಅಂಬಾನಿ ಅವರ ಕುಟುಂಬದಿಂದ ವಿವಾಹ ಆಮಂತ್ರಣ ಪತ್ರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ನವದೆಹಲಿಯ 10 ಜನಪಥದಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ ಮುಕೇಶ್ ಅಂಬಾನಿ ಅವರು ಕಾಂಗ್ರೆಸ್ ನಾಯಕಿಯನ್ನು ಮದುವೆಗೆ ಆಹ್ವಾನಿಸಿದ್ದಾರೆ.
ಫಸ್ಟ್ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್
ದರ್ಶನ್, ಪವಿತ್ರಾ ಗೌಡ ಟೀಮ್ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ