newsics.com
ಇಂದೋರ್: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿಯ ಹುಡುಗನೋರ್ವ ಜೀವ ಉಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ..
ಭಾರೀ ಮಳೆಯ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗಿತ್ತು. ಇದು ಬಾಲಕಿಯೊಬ್ಬಳ ಜೀವವನ್ನೇ ಅಪಾಯದಂಚಿಗೆ ದೂಡಿದ ಸನ್ನಿವೇಶವದು. ಮಧ್ಯಪ್ರದೇಶದ ಇಂದೋರ್‌ನ ಅಮ್ಮರ್ ನಗರದಲ್ಲಿ ರಸ್ತೆ ದಾಟಲು ಪ್ರಯತ್ನಿಸುವಾಗ ಹನ್ನೆರಡು ವರ್ಷದ ಬಾಲಕಿಯೊಬ್ಬಳು 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ನಂತರ ನೀರಿನಲ್ಲಿ ಒದ್ದಾಡುತ್ತಿದ್ದ ಬಾಲಕಿಯನ್ನು ಅಲ್ಲಿಗೆ ಬಂದ ಹುಡುಗನೊಬ್ಬ ಕಾಪಾಡಿದ್ದಾನೆ.
ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗುದ್ದು, ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವೈರಲ್ ಆದ ವಿಡಿಯೋದಲ್ಲಿ ಬಾಲಕಿ ಅಜ್ಜಿಯ ಜೊತೆಗೆ ರಸ್ತೆ ದಾಟಲು ಮುಂದಾಗಿದ್ದಾಳೆ. ಅಜ್ಜಿ ಮುಂದೆ ಹೋಗಿದ್ದು, ಹಿಂದಿನಿಂದ ಬಂದ ಹುಡುಗಿ ರಸ್ತೆಯಲ್ಲಿ ಸಣ್ಣ ಹೊಂಡವೆಂದು ನೀರಿಗೆ ಕಾಲಿಡಲು ಪ್ರಯತ್ನಿಸಿದ್ದಾಳೆ. ಆಗ ಬ್ಯಾಲೆನ್ಸ್ ತಪ್ಪಿ ಬಾಲಕಿ 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ಆಕೆ ಮುಳುಗಿ ನಂತರ ಸಮತೋಲನ ಮಾಡಿ ಗುಂಡಿಯ ಬದಿಗೆ ಬಂದಿದ್ದಾಳೆ. ಆಕೆ ಗುಂಡಿಯಿಂದ ಹೊರಗೆ ಬರಲು ಹೆಣಗಾಡುತ್ತಿರುವಾಗ ಅಲ್ಲಿಗೆ ಬಂದ ಹುಡುಗನೊಬ್ಬ ಆಕೆಯನ್ನು ಮೇಲಕ್ಕೆ ಎತ್ತಿ ಆಕೆಯ ಜೀವ ಉಳಿಸಿರುವುದು ಕಂಡುಬಂದಿದೆ.
https://x.com/fpjindia/status/1808760168609660992
ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286 ಮಂದಿಗೆ ಡೆಂಗ್ಯೂ ಸೋಂಕು