newsics.com
ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (ಎಲ್.ಕೆ. ಅಡ್ವಾಣಿ) ಅವರ ಆರೋಗ್ಯ ಮತ್ತೆ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ರಾತ್ರಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ಅವರನ್ನು ದೆಹಲಿಯ ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.
ಅಡ್ವಾಣಿ ಅವರು ಡಾ. ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.
ಅಡ್ವಾಣಿ ಅವರನ್ನು ಬುಧವಾರ ರಾತ್ರಿ 9 ಗಂಟೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅಡ್ವಾಣಿ ಅವರು ಬಳಲುತ್ತಿದ್ದಾರೆ.
ಡೆಂಗ್ಯೂ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 600 ರೂ. ನಿಗದಿ: ಸರ್ಕಾರ ಆದೇಶ
ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ, ನಾಳೆ ಮತ್ತೆ ಸಿಎಂ ಪಟ್ಟಕ್ಕೇರಲಿರುವ ಹೇಮಂತ್ ಸೊರೇನ್