Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಧಾನಿ‌ ಮೋದಿ ಜತೆ ಟೀಂ ಇಂಡಿಯಾ ಸಂಭ್ರಮ: ಗೆಲುವಿನ ಕ್ಷಣ ಅನಾವರಣ, ವಿಡಿಯೋ ನೋಡಿ
ದೇಶಪ್ರಮುಖ

ಪ್ರಧಾನಿ‌ ಮೋದಿ ಜತೆ ಟೀಂ ಇಂಡಿಯಾ ಸಂಭ್ರಮ: ಗೆಲುವಿನ ಕ್ಷಣ ಅನಾವರಣ, ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಬೆರಿಲ್ ಚಂಡಮಾರುತ ಹಿನ್ನೆಲೆಯಲ್ಲಿ ಬಾರ್ಬ್‌ಡೊಸ್‌ನಿಂದ ತಡವಾಗಿ ಭಾರತಕ್ಕೆ ಬಂದಿಳಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾಗೆ ದೆಹಲಿಯಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ.

ಭಾರತಕ್ಕೆ ಬಂದಿಳಿದ ಟೀಂ ಇಂಡಿಯಾ, ಖಾಸಗಿ ಹೋಟೆಲ್‌ಗೆ ತೆರಳಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅವರ ನಿವಾಸಕ್ಕೆ ಭೇಟಿ ನೀಡಿತು.

ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿಯವರ ಜತೆ ಮಾತುಕತೆ ಮುಗಿಸಿದ ಬಳಿಕ ಇದೀಗ ಭಾರತ ಕ್ರಿಕೆಟ್ ತಂಡವು ಮುಂಬೈನತ್ತ ಪ್ರಯಾಣ ಬೆಳೆಸಿದೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಔತಣಕೂಟದಲ್ಲಿ ಭಾಗವಹಿಸಿದ ಟೀಂ ಇಂಡಿಯಾ, ಇದೀಗ ಸಂಜೆ 5 ಗಂಟೆಯಿಂದ ನಾರಿಮನ್ ಪಾಯಿಂಟ್‌ನಿಂದ ಸುಮಾರು 2 ಕಿ. ಮೀ. ದೂರ ಇರುವ ವಾಂಖೇಡೆ ಕ್ರೀಡಾಂಗಣದವರೆಗೆ ಆಟಗಾರರು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಿದ್ದಾರೆ. 2 ಗಂಟೆ ಗಳ ಕಾಲ ಮೆರವಣಿಗೆ ನಡೆಯುವ ನಿರೀಕ್ಷೆಯಿದ್ದು, ಬಳಿಕ 7 ಗಂಟೆಗೆ ಕ್ರೀಡಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಿಸಿಸಿಐ ಘೋಷಿಸಿರುವ 125 ಕೋಟಿ ರು. ನಗದು ಬಹುಮಾನವನ್ನೂ ಇದೇ ವೇಳೆ ಹಸ್ತಾಂತರಿಸಲಾಗುತ್ತದೆ.

ಜೂನ್ 29ರಂದು ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎದುರು 7 ರನ್ ರೋಚಕ ಜಯ ಸಾಧಿಸಿ 17 ವರ್ಷಗಳ ಬಳಿಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಜಯಿಸುವಲ್ಲಿ ಯಶಸ್ವಿಯಾಗಿತ್ತು. ಇದಾದ ಬಳಿಕ ಜುಲೈ 1ರಂದು ದಿನ ಟೀಂ ಇಂಡಿಯಾ ತವರಿಗೆ ವಾಪಸಾಗಬೇಕಿತ್ತು. ಆದರೆ ಬಾರ್ಬಡೊಸ್‌ನಲ್ಲಿ ಬೆರಿಲ್ ಚಂಡಮಾರುತ ಅಪ್ಪಳಿಸಿದ್ದರಿಂದ, ಪ್ರತಿಕೂಲ ವಾತಾವರಣ ಉಂಟಾಗಿ ಭಾರತ ತಂಡ ತವರಿಗೆ ವಾಪಸ್ಸಾಗುವುದು ತಡವಾಯಿತು.

ಗುರುವಾರ ಮುಂಜಾನೆ 6 ಗಂಟೆಗೆ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತ ಕ್ರಿಕೆಟ್ ತಂಡವು ಬಂದಿಳಿಯಿತು. ಭಾರತ ತಂಡವು ತವರಿಗೆ ಬಂದಿಳಿಯುತ್ತಿದ್ದಂತೆಯೇ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಸಿಕ್ಕಿದೆ.

TEAM INDIA MEETS PM NARENDRA MODI. 🇮🇳pic.twitter.com/tCotFhi4QP

— Mufaddal Vohra (@mufaddal_vohra) July 4, 2024

ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ

ಇನ್ಸ್ಟಾಗ್ರಾಮ್‌ನಲ್ಲಿ ಮುರಿದ ಹಲ್ಲಿನ ಫೋಟೋ ನೋಡಿ ಕಾಣೆಯಾಗಿದ್ದ ಸಹೋದರನನ್ನು ಪತ್ತೆ ಹಚ್ಚಿದ ಮಹಿಳೆ

TAGGED:Team India celebrates with PM Modi: Moment of victory revealed
Share This Article
Facebook Twitter Copy Link Print
Previous Article ವರ್ಷಾಂತ್ಯಕ್ಕೆ ಜಿ-1 ಮಾನವರಹಿತ ಮಿಷನ್ ಉಡಾವಣೆಗೆ ಸಿದ್ಧ: ಇಸ್ರೋ ಅಧ್ಯಕ್ಷ ಡಾ. ಸೋಮನಾಥ್ ಮಾಹಿತಿ
Next Article ಡೆಂಗ್ಯೂಗೆ ಮೈಸೂರಿನ ಆರೋಗ್ಯಾಧಿಕಾರಿ ಬಲಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?