newsics.com
ಮಂಡ್ಯ: ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಲಾಶಯಗಳಲ್ಲೂ ನೀರಿನ ಸಂಗ್ರಹ ಗಣನೀಯವಾಗಿ ಏರಿಕೆಯಾಗುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಳ ಹರಿವಿನಲ್ಲಿ ಮತ್ತಷ್ಟು ಏರಿಕೆಯಾಗಿದೆ.
ಕೊಡಗು, ಭಾಗಮಂಡಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಕನ್ನಂಬಾಡಿ ಅಣೆಕಟ್ಟೆಗೆ ಹೆಚ್ಚಿನ ನೀರು ಹರಿದುಬರುತ್ತಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿಯಾಗಿದೆ. ಕಳೆದ 15 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದೆ.
ಕೆಆರ್‌ಎಸ್ ಡ್ಯಾಂಗೆ ಎರಡು ವಾರದಿಂದ ಸರಾಸರಿ 10 ಸಾವಿರ ಕ್ಯುಸೆಕ್ ಒಳಹರಿವಿದೆ.
ಕೆಆರ್‌ಎಸ್ 100 ಅಡಿ ಭರ್ತಿ ಹಿನ್ನೆಲೆಯಲ್ಲಿ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಜುಲೈ 8 ರಿಂದ ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.
ಕೆಆರ್‌ಎಸ್ ಜಲಾಶಯ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 100.30 ಅಡಿ
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 23.047 ಟಿಎಂಸಿ
ಒಳ ಹರಿವು – 9,686 ಕ್ಯುಸೆಕ್
ಹೊರ ಹರಿವು – 546 ಕ್ಯುಸೆಕ್
ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ, 20 ಐಎಎಸ್ ಅಧಿಕಾರಿಗಳ ಟ್ರಾನ್ಸ್‌ಫರ್