ರಾಜ್ಯದಲ್ಲಿ ವ್ಯಾಪಕ ಮಳೆ: ನೂರು ಅಡಿ ತಲುಪಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

newsics.com ಮಂಡ್ಯ: ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಲಾಶಯಗಳಲ್ಲೂ ನೀರಿನ ಸಂಗ್ರಹ ಗಣನೀಯವಾಗಿ ಏರಿಕೆಯಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಳ ಹರಿವಿನಲ್ಲಿ ಮತ್ತಷ್ಟು ಏರಿಕೆಯಾಗಿದೆ. ಕೊಡಗು, ಭಾಗಮಂಡಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಕನ್ನಂಬಾಡಿ ಅಣೆಕಟ್ಟೆಗೆ ಹೆಚ್ಚಿನ ನೀರು ಹರಿದುಬರುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿಯಾಗಿದೆ. … Continue reading ರಾಜ್ಯದಲ್ಲಿ ವ್ಯಾಪಕ ಮಳೆ: ನೂರು ಅಡಿ ತಲುಪಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ