ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಇನ್ನಿಲ್ಲ

newsics.com ಪುತ್ತೂರು(ದಕ್ಷಿಣ ಕನ್ನಡ): ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿಯಾಗಿದ್ದ ಶ್ರೀಧರ ರಾವ್ ಅವರಿಗೆ ಶುಕ್ರವಾರ(ಜು.5) ಬೆಳಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ್ದ ಇವರು ಧರ್ಮಸ್ಥಳ … Continue reading ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಇನ್ನಿಲ್ಲ