newsics.com
ಬೆಂಗಳೂರು: ನಮ್ಮ ಮೆಟ್ರೋ (BMRCL) ನಾಳೆಯಿಂದ (ಜುಲೈ 6) ಅನ್ಯವಯವಾಗುವಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸೇವೆಯನ್ನು ಹೆಚ್ಚಿಸಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.
ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಬಿಎಂಆರ್ಸಿಎಲ್, ಜುಲೈ 6 ರಿಂದ ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಹೆಚ್ಚುವರಿ ರೈಲ್ವೆ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಈಗ ಇರುವ 9 ರೈಲುಗಳ ಜತೆ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು ಅಗ್ರಹಾರದವರೆಗೆ, 4 ರೈಲುಗಳು ವೈಟ್ಫೀಲ್ಡ್ ಹಾಗೂ 1 ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸಲಿದೆ.
ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ/ ವೈಟ್ಫೀಲ್ಡ್ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿರುವ ನಮ್ಮ ಮೆಟ್ರೋ, ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಸುದ್ದಿಗಳನ್ನೂ ಓದಿ:
ಜಗತ್ತಿನ ಮೊದಲ ಸಿಎನ್ಜಿ ಬೈಕ್ ಬಜಾಜ್ ಫ್ರೀಡಂ 125 ಬಿಡುಗಡೆ: ದೇಶದಲ್ಲೂ ಬುಕಿಂಗ್ ಆರಂಭ
ರಾಜ್ಯದಲ್ಲಿ ವ್ಯಾಪಕ ಮಳೆ: ನೂರು ಅಡಿ ತಲುಪಿದ ಕೆಆರ್ಎಸ್ ಡ್ಯಾಂ ನೀರಿನ ಮಟ್ಟ
ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ, 20 ಐಎಎಸ್ ಅಧಿಕಾರಿಗಳ ಟ್ರಾನ್ಸ್ಫರ್