newsics.com
ಬೆಂಗಳೂರು : ಕರಾವಳಿಯಲ್ಲಿ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ.
ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.