ಭಾರಿ ಮಳೆಯಾಗುವ  ಸಾಧ್ಯತೆ :    ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

newsics.com ಬೆಂಗಳೂರು :  ಕರಾವಳಿಯಲ್ಲಿ ಸೋಮವಾರ ಭಾರಿ ಮಳೆಯಾಗುವ  ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.