Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು
ಕರ್ನಾಟಕ

ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

Share
1 Min Read
SHARE

newsics.com

ಬೆಂಗಳೂರು: ಒದ್ದೆ ಕೈಯಲ್ಲಿ ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯ ಪೇಯಿಂಗ್‌ ಗೆಸ್ಟ್‌(ಪಿ.ಜಿ) ನಿವಾಸಿ ಶ್ರೀನಿವಾಸ್‌ (23) ಮೃತಪಟ್ಟ ವಿದ್ಯಾರ್ಥಿ.

ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಬೀದರ್‌ ಮೂಲದ ಶ್ರೀನಿವಾಸ್‌ ಕಂಪ್ಯೂಟರ್‌ ಕೋರ್ಸ್‌ ವ್ಯಾಸಂಗ ಮಾಡಲು ಒಂದು ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಪಿ.ಜಿ‌.ಯಲ್ಲಿ ನೆಲೆಸಿದ್ದ. ಶುಕ್ರವಾರ ರಾತ್ರಿ ಶೌಚಾಲಯಕ್ಕೆ ಹೋಗಿ ವಾಪಸ್ ಬಂದು ಒದ್ದೆ ಕೈಯಲ್ಲಿ ಮೊಬೈಲ್‌ ಚಾರ್ಜ್‌ಗೆ ಹಾಕಲು ಮುಂದಾಗಿದ್ದಾನೆ. ಈ ವೇಳೆ ವಿದ್ಯುತ್‌ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.

ಕೆಲ ಹೊತ್ತಿನ ಬಳಿಕ ಸ್ನೇಹಿತರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಶ್ರೀನಿವಾಸ್‌ನನ್ನು ಕಂಡು ಮುಟ್ಟಿ ಎಚ್ಚರಗೊಳಿಸಲು ಮುಂದಾಗಿದ್ದಾರೆ. ಈ ವೇಳೆ ಅವರಿಗೂ ವಿದ್ಯುತ್‌ ಶಾಕ್‌ ಹೊಡೆದಿದೆ. ಬಳಿಕ ರೂಮ್‌ನ ವಿದ್ಯುತ್‌ ಸ್ಥಗಿತಗೊಳಿಸಿ, ಕೂಡಲೇ ಶ್ರೀನಿವಾಸ್‌ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ವಿಧಿ ವಿಜ್ಞಾನ ತಜ್ಞರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕೆಲವು ಮಾದರಿಗಳನ್ನು ಸಂಗ್ರಹಿಸಿದೆ. ಶನಿವಾರ ಶ್ರೀನಿವಾಸ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ.

ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಅಸಹಜ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಟ ದರ್ಶನ್ ಬಿಡುಗಡೆಗೆ ದೇವಿ ಮೊರೆ ಹೋದ ವಿಜಯಲಕ್ಷ್ಮಿ

ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ

‘ಗಿಣಿರಾಮ’ ತಂಡ ನನಗೆ ಭಾರೀ ಕಷ್ಟ ಕೊಡ್ತು, ಶೂಟಿಂಗ್ ವಾತಾವರಣ ಚೆನ್ನಾಗಿರಲಿಲ್ಲ… ಕಿರುತೆರೆ ನಟಿ ನಯನಾ ನೋವು

ಇಷ್ಟೆಲ್ಲ ಆದ್ರೂ ಪವಿತ್ರಾ ಗೌಡಗೆ ಪಶ್ಚಾತ್ತಾಪ ಇಲ್ಲ, ಅವಳು ದರ್ಶನ್ ಹೆಂಡ್ತಿ ವಿಜಯಲಕ್ಷ್ಮೀನೇ ಫಾಲೋ‌ ಮಾಡ್ತಾಳೆ… ಆಶಿಕಿ ನಿರ್ದೇಶಕಿ ಚಂದ್ರಕಲಾ ಕಿಡಿ

ನಿಜಕ್ಕೂ ಅಶ್ವಗಂಧ‌ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ‌ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?

TAGGED:Mobile charging with wet hands: Student dies due to electrocution
Share This Article
Facebook Twitter Copy Link Print
Previous Article ನಟ ದರ್ಶನ್ ಬಿಡುಗಡೆಗೆ ದೇವಿ ಮೊರೆ ಹೋದ ವಿಜಯಲಕ್ಷ್ಮಿ
Next Article ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?