newsics.com
ಹಾವೇರಿ: ಡೆಂಘೀ ಹಬ್ಬುತ್ತಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ.
ಹಾವೇರಿ ತಾಲೂಕಿನ ಗ್ರಾಮವೊಂದರ 12 ವರ್ಷದ ಬಾಲಕನಿಗೆ ಇಲಿ ಜ್ವರ ಬಂದಿದೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಜೊತೆಗೆ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ಹಾವೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಕಳೆದ ಒಂದು ವಾರದಿಂದ ಬಾಲಕ ಜ್ವರದಿಂದ ಬಳಲುತ್ತಿದ್ದ. ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತು ಎನ್ನಲಾಗಿದೆ.ಬಾಲಕನ ಆರೋಗ್ಯ ಸ್ಥಿರವಾಗಿದೆ.