Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೇನಾ‌ ವಾಹನಗಳ ಮೇಲೆ ಉಗ್ರರ ದಾಳಿ: ನಾಲ್ವರು ಯೋಧರು ಹುತಾತ್ಮ, 6‌ ಮಂದಿಗೆ ಗಾಯ
ದೇಶಪ್ರಮುಖ

ಸೇನಾ‌ ವಾಹನಗಳ ಮೇಲೆ ಉಗ್ರರ ದಾಳಿ: ನಾಲ್ವರು ಯೋಧರು ಹುತಾತ್ಮ, 6‌ ಮಂದಿಗೆ ಗಾಯ

Share
1 Min Read
SHARE

newsics.com
ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಸೋಮವಾರ ಉಗ್ರರು ಸೇನಾ ವಾಹನಗಳ ಮೇಲೆ ಹೊಂಚು ದಾಳಿ ನಡೆಸಿದ್ದರಿಂದ ನಾಲ್ವರು ಯೋಧರು ಹುತಾತ್ಮರಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಥುವಾ ಪಟ್ಟಣದಿಂದ 150 ಕಿ.ಮೀ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದ ಬಳಿಯ ಕಿಂಡ್ಲಿ-ಮಲ್ಹಾರ್ ರಸ್ತೆಯಲ್ಲಿ ಮಧ್ಯಾಹ್ನ 3.30 ರ ಸುಮಾರಿನಲ್ಲಿ ಉಗ್ರರು ಹೊಂಚು ಹಾಕಿ, ಸೇನಾ ವಾಹನದ ಮೇಲೆ ಗ್ರೇನೆಡ್ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ.

ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ. ಆದರೆ ಉಗ್ರರು ಸಮೀಪದ ಅರಣ್ಯಕ್ಕೆ ಓಡಿಹೋದರು. ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಯೋತ್ಪಾದಕರು ಇತ್ತೀಚೆಗೆ ಗಡಿಯಿಂದ ಒಳನುಸುಳುತ್ತಿದ್ದು, ಎತ್ತರದ ಪ್ರದೇಶಗಳಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಒಟ್ಟು 10 ಸೈನಿಕರು ಗಾಯಗೊಂಡಿದ್ದರು. ಅವರಲ್ಲಿ ನಾಲ್ವರು ನಂತರ ಹುತಾತ್ಮರಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಥುವಾ ಜಿಲ್ಲೆಯಲ್ಲಿ ಕಳೆದ ನಾಲ್ಕು ವಾರಗಳಲ್ಲಿ ನಡೆದ ಎರಡನೇ ಪ್ರಮುಖ ಘಟನೆ ಇದಾಗಿದೆ.

ಜೂನ್ 12 ಮತ್ತು 13 ರಂದು, ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದರು. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು ಹುತಾತ್ಮರಾಗಿದ್ದರು.

ಜೂನ್ 26 ರಂದು ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಮೂವರು ವಿದೇಶಿ ಉಗ್ರರು ಸಾವನ್ನಪ್ಪಿದ್ದರು.

ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!

ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಆ ಕೊರಗೇ ಸಾವಿನವರೆಗೆ ಕರೆದೊಯ್ದಿತಾ?

‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

ರೀಲ್ಸ್‌ ಮಾಡಿ ಹೊಸ ಸ್ಕೂಟಿ ಖರೀದಿಸಿದ ರೀಲ್ಸ್‌ ಸ್ಟಾರ್ ಮಂಗಳ ಅರುಣ್

TAGGED:6 injuredMilitant attack on military vehicles: 4 soldiers martyred
Share This Article
Facebook Twitter Copy Link Print
Previous Article ಫಸ್ಟ್ ಟೈಂ ಬೆಂಗಳೂರಲ್ಲಿ ‘ಎಲಿಫೆಂಟ್ ಓವರ್ ಪಾಸ್’
Next Article ಪವಿತ್ರ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರ ಮೋಜು ಮಸ್ತಿ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?