Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರಾಜ್ಯದಲ್ಲಿಂದು ಡೆಂಗ್ಯೂಗೆ ಇಬ್ಬರು ಬಲಿ, ಝಿಕಾಗೆ ಸರ್ಕಾರದಿಂದ ಮಾರ್ಗಸೂಚಿ,‌ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ
Uncategorized

ರಾಜ್ಯದಲ್ಲಿಂದು ಡೆಂಗ್ಯೂಗೆ ಇಬ್ಬರು ಬಲಿ, ಝಿಕಾಗೆ ಸರ್ಕಾರದಿಂದ ಮಾರ್ಗಸೂಚಿ,‌ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

Share
2 Min Read
SHARE

newsics.com

ಬೆಂಗಳೂರು: ಮೈಸೂರು ಹಾಗೂ ಹಾಸನ ಜಿಲ್ಲೆಯಲ್ಲಿ ಡೆಂಗ್ಯೂಗೆ ತಲಾ ಒಬ್ಬರು ಬಲಿಯಾಗಿದ್ದಾರೆ.

ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತ ಮೃತಪಟ್ಟಿದ್ದರು.

ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿಯಾಗಿರುವ ಘಟನೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂಲೂನಾಯ್ಕ-ಸುಮಿತ್ರಾದೇವಿ ಎಂಬುವರ ಪುತ್ರಿ ಸುಪ್ರೀತಾ (26) ಮೃತ ಯುವತಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರೀತಾಗೆ ಬಹುಅಂಗಾಂಗ ವೈಫಲ್ಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಪ್ರೀತಾ ಮೃತಪಟ್ಟಿದ್ದಾಳೆ. ಇದರಿಂದ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.

ಹಾವೇರಿಯಲ್ಲಿ ಬಾಲಕನಿಗೆ ಇಲಿ ಜ್ವರ!
ಡೆಂಗ್ಯೂ ರುದ್ರ ನರ್ತನದ ನಡುವೆ ಜಿಲ್ಲೆಯಲ್ಲಿ ಇಲಿ ಜ್ವರ (Rat fever) ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ 12 ವರ್ಷದ ಬಾಲಕನಿಗೆ ಇಲಿ ಜ್ವರ ದೃಢಪಟ್ಟಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದೊಂದು ವಾರದಿಂದ ಬಾಲಕ ಜ್ವರದಿಂದ ಬಳಲುತ್ತಿದ್ದ. ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಇಲಿ ಜ್ವರ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸದ್ಯ ಬಾಲಕನ ಆರೋಗ್ಯ ಸ್ಥಿರವಾಗಿದೆ.

ಈ ಬಗ್ಗೆ ಜಿಲ್ಲಾಸ್ಪತ್ರೆಯ ಡಾ.ಭಾಗ್ಯ ಪ್ರತಿಕ್ರಿಯಿಸಿ, ಬಾಲಕನಿಗೆ ಇಲಿ ಜ್ವರ ಬಂದಿರುವುದು ನೆನ್ನೆ ಗೊತ್ತಾಗಿದೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕನ‌ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಡೆಂಗ್ಯೂ ಜ್ವರದ ಲಕ್ಷಣಗಳೇ ಇಲಿ ಜ್ವರ ಕಾಣಿಸಿಕೊಂಡವರಲ್ಲೂ ಕಂಡುಬರುತ್ತವೆ ಎಂದು ತಿಳಿಸಿದರು.

ಏನಿದು ಇಲಿ ಜ್ವರ, ಹೇಗೆ ಹರಡುತ್ತದೆ?
ವೈಜ್ಞಾನಿಕವಾಗಿ ಲೆಪ್ಟೊಸ್ಪಿರೋಸಿಸ್ ಎಂದು ಕರೆಯಲ್ಪಡುವ ಇಲಿ ಜ್ವರ, ಲೆಪ್ಟೊಸ್ಪೈರಾ ಎಂಬ ಬ್ಯಾಕ್ಟೀರಿಯಗಳ ಮೂಲಕ ಪ್ರಾಣಿಗಳಿಂದ ಮಾನವರಿಗೆ ಹರಡುವ ರೋಗವಾಗಿದೆ. ಮುಖ್ಯವಾಗಿ ಇಲಿ, ಹೆಗ್ಗಣಗಳಿಂದ ಈ ರೋಗಾಣುಗಳು ಹರಡುವುದರಿಂದ ಇದಕ್ಕೆ ಇಲಿ ಜ್ವರವೆಂದು ಹೆಸರು. ಈ ರೋಗ ಕೇವಲ ಮನುಷ್ಯರನ್ನಷ್ಟೇ ಅಲ್ಲ, ದನ, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಬೆಕ್ಕು, ವನ್ಯಮೃಗಗಳು ಹೀಗೆ ಬಹುತೇಕ ಪ್ರಾಣಿಗಳನ್ನು ಬಾಧಿಸುತ್ತದೆ.

ಹೆಚ್ಚಾಗಿ ಇಲಿ, ಹೆಗ್ಗಣಗಳ ಮೂಲಕ ಈ ರೋಗ ಹರಡುತ್ತದೆ. ರೋಗಪೀಡಿತ ಇಲಿಗಳು ಹಾಗೂ ಪ್ರಾಣಿಗಳ ಮೂತ್ರದ ಮೂಲಕ ಈ ಕಾಯಿಲೆ ಹರಡುತ್ತದೆ.

ಆದರೆ ಮನುಷ್ಯನಿಂದ ಮನುಷ್ಯನಿಗೆ ಇದು ಹರಡುವುದಿಲ್ಲ. ಮಣ್ಣಿನಲ್ಲಿ ಈ ರೋಗಾಣುಗಳು ಸುಮಾರು 6 ಗಂಟೆವರೆಗೆ ಜೀವಂತವಿದ್ದರೆ, ನೀರಿನಲ್ಲಿ ಆರು ತಿಂಗಳವರೆಗೆ ಬದುಕಬಲ್ಲವು. ಹಾಗಾಗಿ ಮಳೆಗಾಲದಲ್ಲಿ ಈ ರೋಗದ ಹಾವಳಿ ಜಾಸ್ತಿ ಇರುತ್ತದೆ.

ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ವಾಂತಿಯಂತಹ ರೋಗಲಕ್ಷಣಗಳು ಇರುತ್ತವೆ. ಕೆಲವು ಪ್ರಕರಣಗಳಲ್ಲಿ ಇದು ಮೂತ್ರಪಿಂಡ ವೈಫಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಹೀಗಾಗಿ ಸಕಾಲದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ಅಗತ್ಯವಾಗಿದೆ.

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಭಕ್ತ ಸಾವು, ಹಲವರಿಗೆ ಗಾಯ

ಆಗಸ್ಟ್ 30ಕ್ಕೆ ‘ರಾನಿ’ ರಿಲೀಸ್, ವೈರಲ್ ಆಗ್ತಿದೆ ‘ಹವಾಮಾನವೆ…’ ಹಾಡು, ವಿಡಿಯೋ ನೋಡಿ

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ; ಪ್ರತಿ ವರ್ಷ 2,100 ಮಂದಿ ಬಲಿ

TAGGED:government issued guidelines for Zikarat fever was detected in HaveriTwo people died of dengue in the state today
Share This Article
Facebook Twitter Copy Link Print
Previous Article ಆಗಸ್ಟ್ 30ಕ್ಕೆ ‘ರಾನಿ’ ರಿಲೀಸ್, ವೈರಲ್ ಆಗ್ತಿದೆ ‘ಹವಾಮಾನವೆ…’ ಹಾಡು, ವಿಡಿಯೋ ನೋಡಿ
Next Article ಇಂದಿನ ರಾಶಿ ಭವಿಷ್ಯ 08-07-2024… ಕಟಕ- ಎಲ್ಲಕ್ಕೂ ಸಿಟ್ಟಾಗದಿರಿ, ಧನು- ನಿಮ್ಮ‌ ಮಾತೇ ನಿಮಗೆ ಕಷ್ಟ ತಂದೀತು, ನಿಮ್ಮ ರಾಶಿ ಫಲದಲ್ಲೇನಿದೆ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?