newsics.com
ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಪ್ರತಾಪ್ ಕುಮಾರ್ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಪತಿ.
ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ವಿಷ ಸೇವಿಸಿ ಪ್ರತಾಪ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಪ್ರತಾಪ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಾಪ್ ಮೃತಪಟ್ಟಿದ್ದಾರೆ.
ಅಳಿಯನ ಆತ್ಮಹತ್ಯೆ ಬಗ್ಗೆ ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದು, ಮಗಳ ಜತೆ 2008ರಲ್ಲಿ ಮದುವೆ ಆಗಿತ್ತು. ಮಕ್ಕಳ ಆಗಿಲ್ಲ ಎನ್ನುವ ವಿಚಾರದಲ್ಲಿ ಕೊರಗಿತ್ತು. ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಇದ್ದರು. ಆಗ ಸರಿ ಹೋಗಿದ್ದರು
ಎಂದರು.
ಇವತ್ತು ಬೆಳಗ್ಗೆ ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ. ಸಾಯುತ್ತಿದ್ದೇನೆ ಎಂದೂ ಕುಟುಂಬಸ್ಥರಿಗೆ ಕಾಲ್ ಮಾಡಿ ಹೇಳಿದ್ದ. ಈ ವಿಚಾರವನ್ನು ಪ್ರತಾಪ್ ಅವರ ಅಣ್ಣ ಕಾಲ್ ಮಾಡಿ ಮಾಹಿತಿ ನೀಡಿದ್ದ.
ಮದುವೆ ಆಗಿ 16 ವರ್ಷ ಆಗಿತ್ತು. ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೇ ನೋಡಿಕೊಳ್ಳುತ್ತಿದ್ದರು. ಬೆಳಗ್ಗೆ ಜೊತೆಯಲ್ಲಿ ತಿಂಡಿ ಮಾಡಿದ್ದೆವು. ನಾನು ನಮ್ಮ ಭಾಗದ ಕೆರೆಗಳನ್ನು ನೋಡಿ ಬರುವಾಗ ವಿಷಯ ಗೊತ್ತಾಯ್ತು. ನಾಳೆ (ಜುಲೈ 9) ಚನ್ನಗಿರಿಯ ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ಮಾಡುತ್ತೇವೆ ಎಂದು
ಹೇಳಿದರು.
ಈ ನಡುವೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಆತ್ಮಹತ್ಯೆ ಮಾಡಿಕೊಂಡ ಪ್ರತಾಪ್ ಕುಮಾರ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದ ನಿವಾಸಿ. ವೈಯಕ್ತಿಕ ಕಾರಣಕ್ಕೆ ವಿಷ ಸೇವಿಸಿದ್ದಾರೆ. ಅವರು ಶಿವಮೊಗ್ಗ ಕಡೆಯಿಂದ ಕಾರಿನಲ್ಲಿ ಒಬ್ಬರೇ ಬಂದು ಕ್ರಿಮಿನಾಶಕ ಕುಡಿದಿದ್ದಾರೆ. ಕುಡಿದು ಕಾರಿನಲ್ಲಿ ಅಸ್ವಸ್ಥರಾಗಿದ್ದರು. ಮೃತರ ಸಹೋದರ ಪ್ರಭು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪ್ರತಾಪ್ ಕೃಷಿ ಹಾಗೂ ಇತರೇ ವ್ಯವಹಾರ ಮಾಡಿಕೊಂಡಿದ್ದರು. ಮೇಲ್ನೋಟಕ್ಕೆ ಇದೊಂದು ವೈಯಕ್ತಿಕ ಕಾರಣದಿಂದ ನಡೆದ ಘಟನೆ. ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಸದ್ಯ ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಪರಿಶೀಲನೆ ಮಾಡಲಾಗುವುದು. ಇನ್ನೂ ದೂರು ಕೊಟ್ಟಿಲ್ಲ. ದೂರು ನೀಡಿದ ಬಳಿಕ ಪ್ರಕರಣದ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಾಪ್ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ವಿಚಾರವನ್ನು ಮೃತನ ಸಹೋದರ ಪೊಲೀಸರಿಗೆ ತಿಳಿಸಿ ಬಳಿಕ ಬಿ.ಸಿ. ಪಾಟೀಲ್ ಅವರಿಗೂ ವಿಚಾರ ಮುಟ್ಟಿಸಿದ್ದಾರೆ. ಬಳಿಕ ಬಿ.ಸಿ. ಪಾಟೀಲ್ ಅಳಿಯನ ಮೊಬೈಲ್ ನಂಬರ್ ಹಾಗೂ ಕಾರು ನಂಬರ್ ಕೊಟ್ಟಿದ್ದಾರೆ. ನಮ್ಮ ಅಳಿಯ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಕೂಡಲೇ ಅಳಿಯನನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿಕೊಂಡಿದ್ದಾರೆ.
ಕೂಡಲೇ ಶಿವಮೊಗ್ಗ ಪೊಲೀಸರು ಕಾರ್ ನಂಬರ್ ಹಾಗೂ ಮೊಬೈಲ್ ನಂಬರ್ ಟ್ರೇಸ್ ಮಾಡಿ ಪತ್ತೆ ಹಚ್ಚಿದ್ದಾರೆ. ಮಧ್ಯಾಹ್ನ 3 ಘಂಟೆ ಸುಮಾರಿಗೆ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಕಾರು ಪತ್ತೆಯಾಗಿದೆ. ಆ ಸಮಯದಲ್ಲಿ ಪ್ರತಾಪ್ ಕುಮಾರ್ ಕಾರಿನಲ್ಲಿ ವಿಷ ಸೇವಿಸಿ ನರಳಾಡುತ್ತಿದ್ದರಂತೆ. ಕೂಡಲೇ ಪೊಲೀಸರು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ಪ್ರತಾಪ್ ಅವರನ್ನು ದಾಖಲಿಸಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದುದರಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಸಾವನ್ನಪ್ಪಿದ್ದಾರೆ.
ಮಾವ ಬಿಸಿ ಪಾಟೀಲ್ ಹೇಳುವಂತೆ ಮಕ್ಕಳಾಗಿಲ್ಲ ಎನ್ನುವ ಕೊರಗಿನಲ್ಲಿದ್ದರಂತೆ. ಹೀಗಾಗಿ ಪ್ರತಾಪ್ ಮಕ್ಕಳಾಗಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾದ್ರಾ ಎನ್ನುವ ಶಂಕೆ ವ್ಯಕ್ತವಾಗಿದೆ.
‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ
ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು