Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ
ಕರ್ನಾಟಕಪ್ರಮುಖ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ

Share
3 Min Read
SHARE

newsics.com
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅದರಲ್ಲೂ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜು.12ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯದ ಮಳೆ ಕುರಿತು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಇಂದು ಉತ್ತರ ಒಳನಾಡಿನ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೆೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೇಗ (30-40 kmph) ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ

.
ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ 24 ಗಂಟೆಗಳಲ್ಲಿ ಕುಂದಾಪುರ ತಾಲೂಕಿನಲ್ಲಿ 138.6 ಮಿ.ಮೀ ಮಳೆಯಾಗಿದ್ದರೆ, ಉಡುಪಿಯಲ್ಲಿ 118 ಮಿ.ಮೀ ಮಳೆಯಾಗಿದೆ. ಕಾರ್ಕಳ ತಾಲೂಕಿನಲ್ಲಿ 63.9 ಮಿ.ಮೀ, ಬೈಂದೂರಿನಲ್ಲಿ 147.3 ಮಿ.ಮೀ ಮಳೆ ದಾಖಲಾಗಿದೆ. ಬ್ರಹ್ಮಾವರ (104 ಮಿ.ಮೀ.), ಕಾಪು (79.5 ಮಿ.ಮೀ.), ಹೆಬ್ರಿ (95.8 ಮಿ.ಮೀ.) ಭಾಗದಲ್ಲಿಯೂ ಭಾರೀ ಮಳೆಯಾಗಿದೆ.

ಉಡುಪಿಯಲ್ಲಿ ಸುರಿದ ಭಾರೀ ಮಳೆಗೆ ಕರಂಬಳ್ಳಿ ವಾರ್ಡ್‌ನ ಹಲವಾರು ಮನೆಗಳು ಜಲಾವೃತವಾಗಿವೆ. ಗುಂಡಿಬೈಲು ಪಾಡಿಗಾರು ರಸ್ತೆಯಲ್ಲಿ ತೀವ್ರ ಪ್ರವಾಹದ ಹಿನ್ನೆಲೆಯಲ್ಲಿ ಪೇಯಿಂಗ್ ಗೆಸ್ಟ್‌ನಲ್ಲಿ ತಂಗಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಹಲವು ತಾಲೂಕುಗಳಲ್ಲಿ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ಉಡುಪಿ ಜಿಲ್ಲೆಯಲ್ಲಿ 10 ಮನೆಗಳು ಭಾಗಶಃ ಹಾನಿಯಾಗಿದ್ದು, ಒಂದು ಮನೆ ಸಂಪೂರ್ಣ ಹಾನಿಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ, ವಿಶೇಷವಾಗಿ ಕಾಳಿ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದೆ. ಕದ್ರಾ ಅಣೆಕಟ್ಟಿನ ನಾಲ್ಕು ಗೇಟ್‌ಗಳನ್ನು ತೆರೆಯಲಾಗಿದೆ. ಅಣೆಕಟ್ಟಿನಿಂದ ನದಿಗೆ 10,600 ಕ್ಯುಸೆಕ್ ನೀರು ಬಿಡಲಾಗಿದ್ದು, ಇನ್ನೂ 21,000 ಕ್ಯುಸೆಕ್ ವಿದ್ಯುತ್ ಉತ್ಪಾದಿಸಿದ ನಂತರ ಬಿಡುಗಡೆ ಮಾಡಲಾಗಿದೆ, ಇದರೊಂದಿಗೆ 31,600 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಸೋಮವಾರ ಬೆಳಗಿನ ಜಾವದವರೆಗೆ ಅಣೆಕಟ್ಟೆಗೆ 33 ಸಾವಿರ ಕ್ಯುಸೆಕ್ ಒಳಹರಿವು ಇತ್ತು. ಆದರೆ, ಮಳೆಯ ಪ್ರಮಾಣ ತಗ್ಗಿದ ಕಾರಣ ಸೋಮವಾರ ಸಂಜೆ ವೇಳೆಗೆ ಒಳಹರಿವು 22 ಸಾವಿರ ಕ್ಯುಸೆಕ್‌ಗೆ ಇಳಿದಿದೆ.

ವಿಡಿಯೋ ನೋಡಿ:

Condition in parts of Udupi district is brim due to flooding post Torrential downpours for the last 2-3 days

More heavy to very heavy rains ahead for the district in the coming days too

Praying for the safety of the people & animals 🙏#KarnatakaRains
pic.twitter.com/m7p5mFTWKq

— Karnataka Weather (@Bnglrweatherman) July 8, 2024

Flood water entered Hotel Kamal in Kadiyali area in Udupi on Monday#Rain @XpressBengaluru pic.twitter.com/WAhKQCIZF7

— Prakash (@prakash_TNIE) July 8, 2024

ಮಂಗಳವಾರ 09-07-2024 … ಸಿಂಹ- ಅನಾರೋಗ್ಯ ಕಾಡಬಹುದು, ವೃಶ್ಚಿಕ- ಮಾನಸಿಕ ಅಶಾಂತಿ ಉಂಟಾಗಬಹುದು, ನಿಮ್ಮ ರಾಶಿ‌ ಭವಿಷ್ಯದಲ್ಲೇನಿದೆ?

ಪವಿತ್ರ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರ ಮೋಜು ಮಸ್ತಿ!

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಬೆಂಗಳೂರು IIIT:  22 ವರ್ಷದ ಮಗನೊಂದಿಗೆ ಪದವಿ ಪಡೆದುಕೊಂಡ 48 ವರ್ಷದ ತಾಯಿ

ಫಸ್ಟ್ ಟೈಂ ಬೆಂಗಳೂರಲ್ಲಿ ‘ಎಲಿಫೆಂಟ್ ಓವರ್ ಪಾಸ್’

TAGGED:Heavy rains in coastal districts of the state: Rains will continue till June 12
Share This Article
Facebook Twitter Copy Link Print
Previous Article ಮಂಗಳವಾರ 09-07-2024 … ಸಿಂಹ- ಅನಾರೋಗ್ಯ ಕಾಡಬಹುದು, ವೃಶ್ಚಿಕ- ಮಾನಸಿಕ ಅಶಾಂತಿ ಉಂಟಾಗಬಹುದು, ನಿಮ್ಮ ರಾಶಿ‌ ಭವಿಷ್ಯದಲ್ಲೇನಿದೆ?
Next Article ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?